ಇನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲೇ ಗಣರಾಜ್ಯ ದಿನದ ಪುಷ್ಪನಮನ

ಅಮರ್‌ ಜವಾನ್‌ ಜ್ಯೋತಿಯಲ್ಲಿ ನಡೆಯಲ್ಲ ಈ ಪ್ರಕ್ರಿಯೆ;ಇದೇ ಮೊದಲ ಬಾರಿಗೆ ಸಂಪ್ರದಾಯ ಮುರಿಯಲಿರುವ ಪ್ರಧಾನಿ

Team Udayavani, Jan 23, 2020, 8:06 PM IST

ನವದೆಹಲಿ:ಪ್ರತಿ ವರ್ಷದ ಸಂಪ್ರದಾಯವನ್ನು ಮುರಿದು ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಗಣರಾಜ್ಯ ದಿನದ ಪರೇಡ್‌ ಆರಂಭವಾಗುವ ಮುನ್ನ ಅಮರ್‌ಜವಾನ್‌ ಜ್ಯೋತಿಯ ಬದಲಿಗೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ, ಪುಷ್ಪನಮನ ಸಲ್ಲಿಸಲಿದ್ದಾರೆ. ಇವರಿಗೆ ರಕ್ಷಣಾ ಪಡೆಗಳ ಮುಖ್ಯಸ್ಥರು ಹಾಗೂ ಸೇನೆಯ ಮೂರೂ ಪಡೆಗಳ ಮುಖ್ಯಸ್ಥರು ಸಾಥ್‌ ನೀಡಲಿದ್ದಾರೆ.

ಹೀಗೆಂದು ಗಣರಾಜ್ಯ ದಿನದ ಪರೇಡ್‌ ಕಮಾಂಡರ್‌ ಮೇಜರ್‌ ಜನರಲ್‌ ಅಲೋಕ್‌ ಕಕ್ಕರ್‌ ತಿಳಿಸಿದ್ದಾರೆ. ಈವರೆಗೆ ಇದ್ದ ಸಂಪ್ರದಾಯದ ಪ್ರಕಾರ, ಪ್ರಧಾನಿಯು ಗಣರಾಜ್ಯ ದಿನದಂದು ಬೆಳಗ್ಗೆ ಅಮರ್‌ ಜವಾನ್‌ ಜ್ಯೋತಿಯಲ್ಲಿ ಹುತಾತ್ಮ ಯೋಧರಿಗೆ ಪುಷ್ಪನಮನ ಸಲ್ಲಿಸುತ್ತಿದ್ದರು. ಆದರೆ, ಇನ್ನು ಮುಂದೆ ಅಮರ್‌ ಜವಾನ್‌ನಲ್ಲಿ ಈ ಪ್ರಕ್ರಿಯೆ ನಡೆಯುವುದಿಲ್ಲ. ಬದಲಿಗೆ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲೇ ಹುತಾತ್ಮರಿಗೆ ನಮನ ಸಲ್ಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನೀಯರ ಉದ್ಧಟತನ:
ಗಣರಾಜ್ಯ ದಿನದಂದೇ ಲಂಡನ್‌ನಲ್ಲಿ ಭಾರತದ ಸಂವಿಧಾನಕ್ಕೆ ಬೆಂಕಿ ಹಚ್ಚಲು ಪಾಕಿಸ್ತಾನದ ಗುಂಪೊಂದು ನಿರ್ಧರಿಸಿದೆ ಎನ್ನಲಾಗಿದ್ದು, ಈ ಕುರಿತು ಅಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಯುಕೆ ಗೃಹ ಸಚಿವೆ ಪ್ರೀತಿ ಪಟೇಲ್‌ಗೆ ಕರೆ ಮಾಡಿ ಕಳವಳ ವ್ಯಕ್ತಪಡಿಸಿದೆ. ಈ ಪ್ರತಿಭಟನೆಗೆ ಅವಕಾಶ ನೀಡದಂತೆ ಭಾರತೀಯ ಸಮುದಾಯದ ಹಲವರು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ