ಮುಖಾಮುಖಿ ಢಿಕ್ಕಿಯಾಗಿ ತೆರೆದ ಬಾವಿಗೆ ಬಿದ್ದ ಬಸ್- ಅಟೋ: 20 ಜನರ ದುರ್ಮರಣ
Team Udayavani, Jan 29, 2020, 10:45 AM IST
ಮುಂಬೈ: ಸರಕಾರಿ ಬಸ್ ಮತ್ತು ಅಟೋಗಳು ಮುಖಾಮುಖಿ ಢಿಕ್ಕಿಯಾಗಿ ಎರಡೂ ವಾಹನಗಳು ರಸ್ತೆಬದಿಯ ಬಾವಿಗೆ ಬಿದ್ದ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ಮಂಗಳವಾರ ಸಂಜೆಯ ವೇಳೆಗೆ ನಡೆದ ಈ ಭೀಕರ ಅಪಘಾತದಲ್ಲಿ ಸುಮಾರು 20 ಜನರು ಮೃತಪಟ್ಟಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಮತ್ತು ಅಟೋ ನಡುವೆ ಮುಖಾಮುಖಿ ಡಿಕ್ಕಿ ನಡೆದಿದೆ. ನಂತರ ಬಸ್ ಮತ್ತು ಆಟೋ ಬಾವಿಯೊಳಗೆ ಬಿದ್ದಿದೆ. ಬಸ್ ಚಾಲಕನ ಅಜಾಗರೂಕತೆಯೇ ಇದಕ್ಕೆ ಕಾರಣ ಎನ್ನಲಾಗಿದೆ.
ಸುಮಾರು 18 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲರೂ ಬಸ್ ಪ್ರಯಾಣಿಕರು ಎನ್ನಲಾಗಿದೆ.
ಮಂಗಳವಾರ ರಾತ್ರಿ ಹೊತ್ತಿಗೆ 20 ಶವಗಳನ್ನು ಹೊರತೆಗೆಯಲಾಗಿದೆ. ಬಸ್ ಡ್ರೈವರ್ ಕೂಡಾ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದನೆ ಎನ್ನಲಾಗಿದೆ. ಮೃತರ ಕುಟುಂಬಿಕರಿಗೆ ಮಹಾರಾಷ್ಟ್ರ ಸರಕಾರ ಹತ್ತು ಲಕ್ಷ ಪರಿಹಾರ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ