
ಬೆಳ್ಳಂಬೆಳಗ್ಗೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ :4 ಸಾವು, 46ಮಂದಿಗೆ ಗಾಯ
Team Udayavani, Oct 23, 2022, 12:17 PM IST

ಲಕ್ನೋ : ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಪ್ರಯಾಣಿಕರನ್ನು ಹೊತ್ತ ಬಸ್ಸೊಂದು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ನಲ್ವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ.
ಮೃತರನ್ನು ಆಗ್ರಾದ ಶ್ರೇಯಾ (7 ವರ್ಷ) ಜುಂಜುನುವಿನ ಹಮೀದ್ ಅಲಿ (35 ವರ್ಷ), ಜೈಪುರದ ಸುಮೇರ್ ಸಿಂಗ್ (52 ವರ್ಷ) ಮತ್ತು ಕರೌಲಿಯ ಸೋನು ಚತುರ್ವೇದಿ (26 ವರ್ಷ) ಎನ್ನಲಾಗಿದೆ.
ಬಸ್ ಡಿಯೋರಿಯಾದಿಂದ ಅಜ್ಮೀರ್‌ಗೆ ತೆರಳುತ್ತಿತ್ತು ಎನ್ನಲಾಗಿದ್ದು, ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಟಾವಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ), ಜೈ ಪ್ರಕಾಶ್ ಸಿಂಗ್ ಮಾತನಾಡಿ, ಬಸ್‌ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಬೆಳಗಿನ ಜಾವ 3.30ರ ಸುಮಾರಿಗೆ ಬಸ್ ಚಾಲಕನಿಗೆ ನಿದ್ದೆ ಬಂದ ಪರಿಣಾಮ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್ ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಬೇಕೂರು ದುರಂತ: ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮಕ್ಕೆ ಆದೇಶ
इटावा (उत्तर प्रदेश): यात्रियों को लेकर गोरखपुर से अजमेर जा रही एक स्लीपर बस की आगरा-लखनऊ एक्सप्रेस-वे पर ऐक्सीडेंट हो गई। घटना में 4 लोगों की मौत हो गई और गंभीर रूप से घायल 42 लोगों को सैफई के पीजीआई अस्पताल में भर्ती कराया गया है। https://t.co/zQjgmlMXYc pic.twitter.com/BltSkKPYak
— ANI_HindiNews (@AHindinews) October 23, 2022
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಭಾರತದಲ್ಲಿ ಪಾಕ್ ಸರ್ಕಾರದ ಟ್ವಿಟರ್ ಖಾತೆಗೆ ಮತ್ತೆ ತಡೆ
MUST WATCH
ಹೊಸ ಸೇರ್ಪಡೆ

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫಸ್ಟ್ ಲುಕ್ ಪೋಸ್ಟರ್ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಬಳ್ಳಾರಿ: ತವರು ಮನೆ ಸೇರಿದ್ದ ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್