ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ನೇಮಕ

2008ರಲ್ಲಿ ನಡೆದ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಪ್ರಗ್ಯಾ ಆರೋಪಿ

Team Udayavani, Nov 21, 2019, 12:27 PM IST

ನವದೆಹಲಿ: ಭಾರತೀಯ ಜನತಾ ಪಕ್ಷದ ಭೋಪಾಲ್ ಲೋಕಸಭಾ ಕ್ಷೇತ್ರದ ಸಂಸದೆ ಪ್ರಗ್ಯಾ ಠಾಕೂರ್ ಸಿಂಗ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಲಹಾ ಸಮಿತಿಗೆ ಆಯ್ಕೆ ಮಾಡಲಾಗಿದೆ. ಏತನ್ಮಧ್ಯೆ ಮಾಲೇಂಗಾವ್ ಸ್ಫೋಟ ಪ್ರಕರಣದ ಆರೋಪ ಎದುರಿಸುತ್ತಿರುವ ಪ್ರಗ್ಯಾ ಠಾಕೂರ್ ಅವರ ನೇಮಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧದ ಅಭಿಪ್ರಾಯ ವ್ಯಕ್ತವಾಗತೊಡಗಿದೆ.

ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಮುಖ್ಯಸ್ಥರಾಗಿರುವ 21 ಮಂದಿ ಸಂಸದೀಯ ಸಲಹಾ ಸಮಿತಿಗೆ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ.

2008ರಲ್ಲಿ ನಡೆದ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಪ್ರಗ್ಯಾ ಆರೋಪಿಯಾಗಿದ್ದು, ಪ್ರಸ್ತುತ ಅನಾರೋಗ್ಯದ ಕಾರಣದಿಂದ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಪ್ರಗ್ಯಾ ಠಾಕೂರ್ ಸೋಲಿಸಿದ್ದರು. 21 ಜನರನ್ನೊಳಗೊಂಡಿರುವ ರಕ್ಷಣಾ ಸಚಿವಾಲಯದ ಸಂಸದೀಯ ಸಲಹಾ ಸಮಿತಿಯಲ್ಲಿ ವಿರೋಧ ಪಕ್ಷದ ಮುಖಂಡರಾದ ಫಾರೂಖ್ ಅಬ್ದುಲ್ಲಾ, ಟಿಎಂಸಿಯ ಸುಗತಾ ರಾಯ್, ಡಿಎಂಕೆ ಎ.ರಾಜಾ ಮತ್ತು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಥಾನ ಪಡೆದಿರುವುದಾಗಿ ವರದಿ ತಿಳಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ