
ಇಬ್ಬರು ಸಿಬ್ಬಂದಿಯ ಸಮಯಪ್ರಜ್ಞೆಯಿಂದ ರೈಲು ಪ್ರಯಾಣಿಕನ ಜೀವ ಉಳಿಯಿತು : ವಿಡಿಯೋ ವೈರಲ್
Team Udayavani, Sep 24, 2022, 4:06 PM IST

ತಮಿಳುನಾಡು : ಚಲಿಸುತ್ತಿರುವ ರೈಲಿನಿಂದ ಇಳಿಯಲು ಹೋಗಿ ಪ್ಲಾಟ್ ಫಾರ್ಮ್ ನಿಂದ ಕೆಳಗೆ ಬಿದ್ದ ವ್ಯಕ್ತಿಯನ್ನು ಇಬ್ಬರು ಸಿಆರ್ ಪಿಎಫ್ ಸಿಬ್ಬಂದಿಗಳು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆರ್‌ಪಿಎಫ್ ಇಂಡಿಯಾ ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ ಅಲ್ಲದೆ ಇಬ್ಬರು ಯೋಧರ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಘಟನೆಯ ದೃಶ್ಯ ಪ್ಲಾಟ್‌ಫಾರ್ಮ್‌ನ ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು ವ್ಯಕ್ತಿ ರೈಲು ನಿಲ್ಲುವ ಮೊದಲೇ ಇಳಿಯಲು ಹೋಗಿ ಎಡವಿ ರೈಲು ಕಂಪಾರ್ಟ್‌ಮೆಂಟ್ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿಕೊಂಡಿದ್ದು ಕೂಡಲೇ ಅಲ್ಲಿದ್ದ ಆರ್‌ಪಿಎಫ್ ಸಹಾಯಕ ಸಬ್-ಇನ್‌ಸ್ಪೆಕ್ಟರ್ ಅರುಣ್‌ಜಿತ್ ಮತ್ತು ಲೇಡಿ ಹೆಡ್ ಕಾನ್‌ಸ್ಟೆಬಲ್ ಪಿಪಿ ಮಿನಿ ಕೂಡಲೇ ಕಾರ್ಯಪ್ರವೃತ್ತರಾಗಿ ವ್ಯಕ್ತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕ್ಲಿಪ್ ಅನೇಕ ವೀಕ್ಷಣೆಗಳು ಮತ್ತು ಪ್ರತಿಕ್ರಿಯೆಗಳನ್ನು ಗಳಿಸಿದೆ. ಜನರು ಆರ್‌ಪಿಎಫ್ ಸಿಬ್ಬಂದಿಯ ಧೈರ್ಯವನ್ನು ಶ್ಲಾಘಿಸಿದರು ಮತ್ತು ತ್ವರಿತವಾಗಿ ಕಾರ್ಯ ನಿರ್ವಹಿಸಿದ್ದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದರು.
ಇದನ್ನೂ ಓದಿ : ಎದೆನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿಗೆ ವರದಿಯಲ್ಲಿ ಕಾದಿತ್ತು ಶಾಕ್…
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಕಾನೂನು ಸಚಿವ, ಖ್ಯಾತ ವಕೀಲ ಶಾಂತಿ ಭೂಷಣ್ ಇನ್ನಿಲ್ಲ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
