ರಾಹುಲ್ ವಿರುದ್ಧ 100 ಕೋಟಿ ವಂಚನೆ ಆರೋಪ
Team Udayavani, Jan 10, 2019, 12:30 AM IST
ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ 2011-12 ರಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ 100 ಕೋಟಿ ರೂ. ಗೂ ಹೆಚ್ಚು ಮೊತ್ತದ ತೆರಿಗೆ ತಪ್ಪಿಸಿದ್ದಾರೆ. ಈ ಸಂಬಂಧ ಆದಾಯ ತೆರಿಗೆ ಇಲಾಖೆಯು ನೋಟಿಸ್ ಕೂಡ ನೀಡಿದೆ. 2011-12ರಲ್ಲಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ಗೆ ಸಂಬಂಧಿಸಿದ ಆದಾಯನ್ನು ಮರುಪರಿಶೀಲನೆ ಮಾಡುವಾಗ ಈ ಅಂಶ ಬೆಳಕಿಗೆ ಬಂದಿದೆ. ರಾಹುಲ್ ಗಾಂಧಿ ಆ ವರ್ಷ ತನ್ನ ಆದಾಯವನ್ನು ಕೇವಲ 68.12 ಲಕ್ಷ ರೂ. ಹಾಗೂ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ 48.93 ಕೋಟಿ ರೂ. ಎಂದು ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಪುನಃ ವಿಚಾರಣೆ ಮಾಡಲು ಸುಪ್ರೀಂಕೋರ್ಟ್ ಆದೇಶಿಸಿದೆ. ಡಿಸೆಂಬರ್ 31 ರಂದು ಆದಾಯ ತೆರಿಗೆ ಇಲಾಖೆ ಹೊರಡಿಸಿದ ಆದೇಶದಲ್ಲಿ ಸೋನಿಯಾ ಹಾಗೂ ರಾಹುಲ್ ಆದಾಯವು 300 ಕೋಟಿ ರೂ.ಆಗಿದ್ದು, 100 ಕೋಟಿ ರೂ. ತೆರಿಗೆ ಭರಿಸಬೇಕಾಗಿದೆ.
16ಕ್ಕೆ ಮುಂದೂಡಿಕೆ: ಮತ್ತೂಂದು ಬೆಳವಣಿಗೆಯಲ್ಲಿ ಎಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಕಚೇರಿ ತೆರವುಗೊಳಿಸಬೇಕು ಎಂಬ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಜ.16ಕ್ಕೆ ದೆಹಲಿ ಹೈಕೋರ್ಟ್ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ