ಪಶ್ಚಿಮಬಂಗಾಳ; RSS ಕಾರ್ಯಕರ್ತ, ಗರ್ಭಿಣಿ ಪತ್ನಿ, ಮಗು ಸೇರಿ ಮೂವರ ಹತ್ಯೆ
Team Udayavani, Oct 10, 2019, 4:17 PM IST
ಕೋಲ್ಕತಾ: 35 ವರ್ಷದ ಶಾಲಾ ಶಿಕ್ಷಕ, ಆರ್ ಎಸ್ ಎಸ್ ಕಾರ್ಯಕರ್ತ ಬಂಧು ಪ್ರಕಾಶ್ ಪಾಲ್, 8ತಿಂಗಳ ಗರ್ಭಿಣಿ ಪತ್ನಿ ಹಾಗೂ ಆರು ವರ್ಷದ ಮಗನನ್ನು ಹತ್ಯೆಗೈದಿರುವ ಘಟನೆ ಪಶ್ಚಿಮಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಪ್ರಕಾಶ್ ಪಾಲ್ (35ವರ್ಷ), ಬ್ಯೂಟಿ ಪಾಲ್ (28 ವರ್ಷ) ಹಾಗೂ ಪುತ್ರ ಅನ್ಗಾನ್ ಪಾಲ್ (6ವರ್ಷ) ಶವ ಮಂಗಳವಾರ ಮಧ್ಯಾಹ್ನ ಪತ್ತೆಯಾಗಿದ್ದು, ಮೂವರ ದೇಹದ ಮೇಲೆ ಗಾಯದ ಗುರುತುಗಳಿವೆ. ಮಗುವಿನ ಕುತ್ತಿಗೆಯನ್ನು ಟವೆಲ್ ನಿಂದ ಬಿಗಿದು ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಬಿಜೆಪಿ ಉಪಾಧ್ಯಕ್ಷ ಹುಮಾಯೂನ್ ಹಾಗೂ ಪೊಲೀಸ್ ಅಧಿಕಾರಿಗಳು, ಹತ್ಯೆ ಘಟನೆಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಪಾಲ್ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆರ್ ಎಸ್ ಎಸ್ ಕಾರ್ಯಕರ್ತ ಕೂಡಾ ಆಗಿದ್ದರು. ಆದರೆ ಕೊಲೆ ಹಿಂದೆ ರಾಜಕೀಯ ಕಾರಣ ಇಲ್ಲ ಎಂದು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಈವರೆಗೂ ಯಾರನ್ನೂ ಬಂಧಿಸಿಲ್ಲ. ಹಲವು ಆಯಾಮಗಳಲ್ಲಿ ಕೊಲೆ ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಇವರೇ ಚೂರಿಯಿಂದ ಇರಿದುಕೊಂಡು ಸಾವನ್ನಪ್ಪಿರಬೇಕೆಂದು ಶಂಕಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ. ಮತ್ತೊಂದೆಡೆ ಈ ಕೊಲೆ ಪ್ರಕರಣ ಪಶ್ಚಿಮಬಂಗಾಳದಲ್ಲಿ ರಾಜಕೀಯ ತಿರುವು ಪಡೆದುಕೊಂಡಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ