ಕನ್ನಡದಲ್ಲಿ ಗ್ರಾಮೀಣ ಬ್ಯಾಂಕಿಂಗ್‌ ಪರೀಕ್ಷೆ

Team Udayavani, Jul 5, 2019, 5:01 AM IST

nirmala

ಹೊಸದಿಲ್ಲಿ: ಬ್ಯಾಂಕಿಂಗ್‌ ಪರೀಕ್ಷೆ ತೆಗೆದುಕೊಳ್ಳುವವರಿಗೊಂದು ಸಿಹಿ ಸುದ್ದಿ. ಶೀಘ್ರದಲ್ಲೇ ಕನ್ನಡಿಗರು, ಕನ್ನಡದಲ್ಲೇ ಬ್ಯಾಂಕ್‌ಗಳ ಸಿಬಂದಿ ನೇಮಕಾತಿ ಪರೀಕ್ಷೆ ಬರೆಯಬಹುದು. ಕರ್ನಾಟಕ ಸರಕಾರದ ಬಹುದಿನಗಳ ಬೇಡಿಕೆಗೆ ಕೇಂದ್ರ ಸರಕಾರ ಕಡೆಗೂ ಒಪ್ಪಿಗೆ ನೀಡಿದೆ.

ಈವರೆಗೆ ಕೇವಲ ಇಂಗ್ಲಿಷ್‌ ಮತ್ತು ಹಿಂದಿ ಭಾಷೆಗಳಲ್ಲಿ ಮಾತ್ರ ನಡೆಸಲಾಗುತ್ತಿದ್ದ ಬ್ಯಾಂಕ್‌ಗಳ ಸಿಬಂದಿ ನೇಮಕಾತಿ ಪರೀಕ್ಷೆಗಳನ್ನು ಇನ್ನು ಮುಂದೆ ಕನ್ನಡ ಸಹಿತ 13 ಪ್ರಾಂತೀಯ ಭಾಷೆಗಳಲ್ಲಿ ನಡೆಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ಗುರುವಾರ ಘೋಷಿಸಿದರು.

ವಿವಿಧ ರಾಜ್ಯಗಳಲ್ಲಿನ ಪ್ರಾಂತೀಯ ಹಾಗೂ ಗ್ರಾಮೀಣ ಬ್ಯಾಂಕ್‌ (ಆರ್‌ಆರ್‌ಬಿ)ಗಳಲ್ಲಿನ ಅಧಿಕಾರಿಗಳು (ಶ್ರೇಣಿ-1) ಹಾಗೂ ಕಚೇರಿಯ ಸಹಾಯಕ ಸಿಬಂದಿಯ ನೇರ ನೇಮಕಾತಿ ಪರೀಕ್ಷೆಗಳನ್ನು ಆಯಾ ಪ್ರಾದೇಶಿಕ ಭಾಷೆಗಳಲ್ಲಿ ನಡೆಸಬೇಕು ಎಂಬುದು ಕರ್ನಾಟಕ ಸಹಿತ ಹಲವಾರು ರಾಜ್ಯ ಸರಕಾರಗಳ ಬೇಡಿಕೆಯಾಗಿತ್ತು.

ಇತ್ತೀಚೆಗಷ್ಟೇ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸಂಸದರಾದ ತೇಜಸ್ವಿ ಸೂರ್ಯ ಮತ್ತು ಚಂದ್ರಶೇಖರ್‌, ಬ್ಯಾಂಕಿಂಗ್‌ ಪರೀಕ್ಷೆಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾವಿಸಿದ್ದರು. ಆಗ ಉತ್ತರಿಸಿದ್ದ ನಿರ್ಮಲಾ ಸೀತಾರಾಮನ್‌, ಈ ಬಗ್ಗೆ ಹಲವಾರು ಸಂಸದರಿಂದ ಮನವಿಗಳು ಬಂದಿವೆ ಎಂದು ಹೇಳಿದ್ದರು.

ಇದೇ ವಿಚಾರವಾಗಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸ್ವಯಂ ಪ್ರೇರಿತವಾಗಿ ಉತ್ತರಿಸಿದ ಸಚಿವರು, ಪ್ರಾಂತೀಯ ಭಾಷೆಗಳನ್ನು ನಿರರ್ಗಳವಾಗಿ ಮಾತನಾಡುವ ಗ್ರಾಮೀಣ ಅಭ್ಯರ್ಥಿಗಳಿಗೆ ಪ್ರಾದೇಶಿಕ ಬ್ಯಾಂಕ್‌ಗಳಲ್ಲಿ ಉದ್ಯೋಗ ಸಂಪಾದಿಸುವ ಅವಕಾಶಗಳನ್ನು ಹೆಚ್ಚಿಸಲಾಗಿದೆ ಎಂದು ಹೇಳಿದರು.

ಸೌಲಭ್ಯ ವಿಸ್ತರಣೆಗೆ ಆಗ್ರಹ

ವಿತ್ತ ಸಚಿವರ ಘೋಷಣೆಯನ್ನು ಸ್ವಾಗತಿಸಿದ ರಾಜ್ಯಸಭೆ ಸಂಸದ ಎಲ್. ಹನುಮಂತಯ್ಯ, ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯುವ ಅವಕಾಶ, ರಾಷ್ಟ್ರೀಯ ಬ್ಯಾಂಕ್‌ಗಳ ಸಿಬಂದಿ ನೇಮಕಾತಿಗೂ ಅನ್ವಯವಾಗುವಂತಾಗಲಿ ಎಂದು ಆಶಿಸಿದರು.

ಗಡುವು ಮುಗಿದ ದಿನವೇ ಘೋಷಣೆ!

ಆರ್‌ಆರ್‌ಬಿ ನೇಮಕಾತಿ ಪರೀಕ್ಷೆಗಳನ್ನು ನಡೆಸುವ ಜವಾಬ್ದಾರಿಯನ್ನು ಬ್ಯಾಂಕಿಂಗ್‌ ಪರ್ಸನಲ್ ಸೆಲೆಕ್ಷನ್‌ (ಐಬಿಪಿಎಸ್‌) ಹೊತ್ತಿದೆ. ಪ್ರಸಕ್ತ ವರ್ಷದಲ್ಲಿ ಗ್ರಾಮೀಣ ಬ್ಯಾಂಕ್‌ಗಳ ಸಿಬಂದಿ ನೇಮಕಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜು. 4ರಂದು ಕೊನೆಯ ದಿನವಾಗಿತ್ತು. ಇದೇ ದಿನ ವಿತ್ತ ಸಚಿವರು 13 ಭಾಷೆಗಳಲ್ಲಿ ಪರೀಕ್ಷೆ ನಡೆಸಲು ಒಪ್ಪಿಗೆ ಘೋಷಿಸಿದ್ದಾರೆ. ಹೀಗಾಗಿ ಈ ವರ್ಷ ನಡೆಯುತ್ತದೆಯೋ ಅಥವಾ ಮುಂದಿನ ವರ್ಷವೋ ಎಂಬ ಬಗ್ಗೆ ಖಾತ್ರಿಯಾಗಿಲ್ಲ. ಒಂದು ವೇಳೆ ಐಬಿಪಿಎಸ್‌ ಎಲ್ಲ ಸಿದ್ಧತೆ ಮಾಡಿಕೊಂಡರೆ ಈ ವರ್ಷ ನಡೆಸಬಹುದು. ಈಗಾಗಲೇ ಪ್ರಕಟಿಸಿರುವಂತೆ ಈ ವರ್ಷದ ಪರೀಕ್ಷೆಗಳು ಆ. 3, 4, 11, 17, 18ರಂದು ನಡೆಯಲಿವೆ.
ಹೊಸ ಭಾಷೆಗಳು ಯಾವುವು?

ಕನ್ನಡ, ತೆಲುಗು, ತಮಿಳು, ಬಂಗಾಲಿ, ಅಸ್ಸಾಮಿ, ಗುಜರಾತಿ, ಕೊಂಕಣಿ, ಮಲಯಾಳ, ಮಣಿಪುರಿ, ಮರಾಠಿ, ಒರಿಯಾ, ಪಂಜಾಬಿ ಹಾಗೂ ಉರ್ದು. ಹಾಗೆಯೇ ಇಂಗ್ಲಿಷ್‌ ಮತ್ತು ಹಿಂದಿ ಭಾಷೆಯಲ್ಲೂ ಪರೀಕ್ಷೆಗಳು ಮುಂದುವರಿಯಲಿವೆ.
ಎಲ್ಲರ ಪ್ರಯತ್ನಕ್ಕೆ ಫ‌ಲ ದೊರಕಿದ್ದು, ಕನ್ನಡ ಭಾಷೆಗೆ ಜಯ ಸಿಕ್ಕಿದೆ. ಇದಕ್ಕಾಗಿ ನಾಡಿನ ಸಮಸ್ತ ಜನರ ಪರವಾಗಿ ಪ್ರಧಾನಿ ಹಾಗೂ ಕೇಂದ್ರ ಹಣಕಾಸು ಸಚಿವರಿಗೆ ಅಭಿನಂದನೆ ಸಲ್ಲಿಸಲಾಗುವುದು.
– ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವ
ಕೇಂದ್ರದ ನಿರ್ಧಾರ ಸ್ವಾಗತಿಸುತ್ತೇನೆ. ಸ್ಥಳೀಯ ಬ್ಯಾಂಕ್‌ಗಳಿಗೆ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಥಳೀಯ ಭಾಷೆಯನ್ನು 1ರಿಂದ 10ನೇ ತರಗತಿಯವರೆಗೆ ಕಡ್ಡಾಯವಾಗಿ ಓದಿರಲೇಬೇಕೆಂಬ 2014ರ ನಿಯಮ ಹಿಂಪಡೆದರೆ ಕನ್ನಡಿಗರಿಗೆ ಇನ್ನಷ್ಟು ಅನುಕೂಲವಾಗುತ್ತದೆ.
– ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.