ಭಾರತದ ಕಾಶ್ಮೀರ ನಿಲುವಿನಲ್ಲಿ ಸಂಶಯವೇ ಇಲ್ಲವೆಂದ ರಷ್ಯಾ

Team Udayavani, Jan 17, 2020, 8:43 PM IST

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಭಾರತ ಹೊಂದಿರುವ ನಿಲುವಿನಲ್ಲಿ ಯಾವುದೇ ಸಂಶಯ ಇಲ್ಲ. ಅದೇನಿದ್ದರೂ ಭಾರತ ಮತ್ತು ಪಾಕಿಸ್ತಾನಗಳು ನಡುವಿನ ದ್ವಿಪಕ್ಷೀಯ ವಿಚಾರ ಎಂದು ನವದೆಹಲಿಯಲ್ಲಿರುವ ರಷ್ಯಾ ರಾಯಭಾರಿ ನಿಕೋಲೆ  ಶುಕ್ರವಾರ ತಿಳಿಸಿದ್ದಾರೆ.

ಕಣಿವೆ ರಾಜ್ಯದಲ್ಲಿನ ಪರಿಸ್ಥಿತಿಯ ಬಗ್ಗೆ ಭಾರತ ಸರ್ಕಾರ ಹೊಂದಿರುವ ನಿಲುವಿನಲ್ಲಿ ಸಂಶಯಗಳಿದ್ದರೆ ವಿದೇಶಿ ರಾಯಭಾರಿಗಳ ನಿಯೋಗದ ಜತೆಗೆ ಅಲ್ಲಿಗೆ ಭೇಟಿ ನೀಡಬಹುದಾಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಿದ ವಿದೇಶಿ ರಾಯಭಾರಿಗಳ ನಿಯೋಗದಲ್ಲಿ ರಷ್ಯಾ ರಾಯಭಾರಿ ಇಲ್ಲದೇ ಇದ್ದ ಬಗ್ಗೆ ಅವರು ಈ ವಿವರಣೆ ನೀಡಿದ್ದಾರೆ. ಈ ನಡುವೆ, ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮಾ.22, 23ರಂದು ಮಾಸ್ಕೋಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ

ಇದರ ಜತೆಗೆ ರಷ್ಯಾದಿಂದ ಖರೀದಿಸಲು ಉದ್ದೇಶಿಸಿರುವ ಎಸ್‌-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು 2025ರ ಒಳಗಾಗಿ ಪೂರ್ಣವಾಗಿ ಭಾರತಕ್ಕೆ ಹಸ್ತಾಂತರ ಮಾಡಲಾಗುತ್ತದೆ ಎಂದು ಉಪ ರಾಯಭಾಕಿ ರೋಮನ್‌ ಬಾಬುಷ್ಕಿನ್‌ ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ