ನ. 8ರ ಬಳಿಕ ಐಟಿ ದಾಳಿಯಿಂದ 4,800 ಕೋ.ರೂ. ಕಪ್ಪು ಹಣ ಪತ್ತೆ
Team Udayavani, Jan 9, 2017, 3:45 AM IST
ಹೊಸದಿಲ್ಲಿ: 500, 1000 ರೂ. ಮುಖಬೆಲೆಯ ನೋಟುಗಳ ರದ್ದತಿ ಬಳಿಕ ಕರ್ನಾಟಕ ಸೇರಿದಂತೆ ದೇಶಾದ್ಯಂತ ನಿರಂತರ ದಾಳಿಗಳನ್ನು ನಡೆಸಿದ್ದ ಆದಾಯ ತೆರಿಗೆ ಇಲಾಖೆ, ಜನವರಿ 5ರವರೆಗೆ ಬರೋಬ್ಬರಿ 4807 ಕೋಟಿ ರೂ. ಕಪ್ಪು ಹಣವನ್ನು ಪತ್ತೆ ಹಚ್ಚುವಲ್ಲಿ ಸಫಲವಾಗಿದೆ. ಈ ಪೈಕಿ 112 ಕೋಟಿ ರೂ. ಹಣ ಹೊಸ ನೋಟುಗಳ ರೂಪದಲ್ಲಿ ಸಿಕ್ಕಿದೆ.
ನ.8ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಪನಗದೀಕರಣ ನಿರ್ಧಾರ ಘೋಷಣೆ ಮಾಡುತ್ತಿದ್ದಂತೆ ಕಾರ್ಯಪ್ರವೃತ್ತರಾದ ತೆರಿಗೆ ಅಧಿಕಾರಿಗಳು 1138 ಶೋಧ, ಸಮೀಕ್ಷೆ ಹಾಗೂ ವಿಚಾರಣೆಗಳನ್ನು ನಡೆಸಿದ್ದಾರೆ. ತೆರಿಗೆ ವಂಚನೆ ಹಾಗೂ ಹವಾಲಾ ರೀತಿಯ ವ್ಯವಹಾರ ಆರೋಪದ ಮೇರೆಗೆ 5184 ಸಂಸ್ಥೆ ಹಾಗೂ ವ್ಯಕ್ತಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಈ ಶೋಧ ಕಾರ್ಯಾಚರಣೆ ವೇಳೆ 609.39 ಕೋಟಿ ರೂ. ಮೌಲ್ಯದ ನಗದು ಹಾಗೂ ಆಭರಣಗಳು ಜಪ್ತಿಯಾ ಗಿವೆ. ಈ ಪೈಕಿ ಆಭರಣದ ಮೌಲ್ಯ 97.8 ಕೋಟಿ ರೂ. ಉಳಿದಂತೆ ಬಹುತೇಕ 2000 ರೂ. ಮುಖಬೆಲೆಯ ನೋಟುಗಳ ರೂಪದಲ್ಲಿ ಇದ್ದ 112.8 ಕೋಟಿ ರೂ. ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ