ಮಂಡಲ ಪೂಜೆ: ತೆರೆದ ಶಬರಿಮಲೆ ಅಯ್ಯಪ್ಪ ಸನ್ನಿಧಾನ, ಮಹಿಳೆಯರಿಗೆ ಪ್ರವೇಶಾವಕಾಶ ಇಲ್ಲ

Team Udayavani, Nov 16, 2019, 6:56 PM IST

ತಿರುವನಂತಪುರಂ: ಮಂಡಲ ಪೂಜೆಗಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯದ ಬಾಗಿಲು ಶನಿವಾರ ತೆರೆಯಲಾಗಿದೆ.

ಸಂಜೆ 5 ಗಂಟೆಗೆ ದೇವಾಲಯದ ಬಾಗಿಲನ್ನು ತೆಗೆಯಲಾಗುತ್ತಿದ್ದು, ಈಗಾಗಲೇ ಭಕ್ತರು ಶಬರಿಮಲೆಯತ್ತ ಪ್ರಯಾಣ ಬೆಳೆಸಿದ್ದಾರೆ. ಇಂದಿನಿಂದ ಮೂರು ತಿಂಗಳುಗಳ ಕಾಲ ದೇವರ ದರ್ಶನ ಪಡೆಯಬಹುದಾಗಿದೆ. ಈ ವಾರ ರಾಜ್ಯ ಮತ್ತು ನೆರೆಯ ರಾಜ್ಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸನ್ನಿಧಾನಕ್ಕೆ ನೀಡಲಿದ್ದು, ಬಳಿಕ ಹೊರ ರಾಜ್ಯದ ಭಕ್ತರ ಸಂಖ್ಯೆ ಹೆಚ್ಚಾಗಲಿದೆ.

ಸುಪ್ರೀಂಕೋರ್ಟ್ ತೀರ್ಪಿನ ಬಳಿಕವೂ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರವೇಶ ನಿರಾಕರಣೆಯಾಗುತ್ತಿದೆ. ಇನ್ನು ಈ ಬಾರಿ ದರ್ಶನಕ್ಕಾಗಿ ತೆರಳಿದ 10ರಿಂದ 50 ವರ್ಷದೊಳಗಿನ 10 ಮಹಿಳೆಯರನ್ನು ಪಂಬಾ ಬಳಿ ಕಾರ್ಯಕರ್ತರು ತಡೆ ಹಿಡಿಯಲಾಗಿದ್ದು, ಅವರನ್ನು ವಾಪಸ್ಸು ಕಳುಹಿಸಲಾಗಿದೆ. ಇವರೆಲ್ಲಾ ವಿಜಯವಾಡ ಮತ್ತು ಆಂಧ್ರಪ್ರದೇಶ ಮೂಲದ ಭಕ್ತರು ಎಂದು ತಿಳಿದುಬಂದಿದೆ.

ಶಬರಿಮಲೆ ಪ್ರವೇಶಿಸುವ ಮಹಿಳೆಯರಿಗೆ ಸರಕಾರದ ವತಿಯಿಂದ ಪೊಲೀಸ್ ರಕ್ಷಣೆ ನೀಡಲಾಗಿಲ್ಲ. ಕಾನೂನು ಸುವ್ಯವಸ್ಥೆಗೆ ಮಾತ್ರ ಅಲ್ಲಿನ ಸರಕಾರ ಪೊಲೀಸರನ್ನು ನಿಯೋಜಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ