ಶಬರಿಮಲೆ: ಮಹಿಳಾ ಭಕ್ತರಿಗೆ ಹೆಲಿಕಾಪ್ಟರ್‌ ಸೇವೆ!


Team Udayavani, Nov 11, 2018, 6:00 AM IST

29.jpg

ತಿರುವನಂತಪುರ: ಶಬರಿ ಮಲೆ ದೇಗುಲಕ್ಕೆ ಎಲ್ಲ ವಯೋ ಮಿತಿಯ ಮಹಿಳೆಯರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲು ಕೇರಳ ಪೊಲೀಸ್‌ ಇಲಾಖೆ ಮಿಲಿಟರಿ ಹೆಲಿ ಕಾಪ್ಟರ್‌ಗಳ ಬಳಕೆಗೆ ನಿರ್ಧರಿಸಿದೆ ಎಂದು ಹೇಳಲಾಗಿದೆ.

ತಿರುವನಂತಪುರ ಅಥವಾ ಕೊಚ್ಚಿಯಿಂದ ಹೆಲಿಕಾಪ್ಟರ್‌ ಸೇವೆ ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದು ಮೂಲಗಳನ್ನು ಉಲ್ಲೇಖೀಸಿ “ದ ಹಿಂದೂ’ ಪತ್ರಿಕೆ ವರದಿ ಮಾಡಿದೆ. ನ.17ರಿಂದ 41 ದಿನಗಳ ಕಾಲ ಮಂಡಲ ಪೂಜೆ ಮತ್ತು ಮಕರವಿಳಕ್ಕು ಸಂದರ್ಭಕ್ಕೆ ದೇಗುಲ ತೆರೆಯಲಿರುವಂತೆಯೇ ಹೆಲಿಕಾಪ್ಟರ್‌ ಬಳಕೆಯ ಸಾಧ್ಯತೆ ಬಗ್ಗೆ ಕೇರಳ ಪೊಲೀಸ್‌ ಇಲಾಖೆ ವರಿಷ್ಠರು ಚಿಂತನೆ ನಡೆಸುತ್ತಿದ್ದಾರೆ. ಕೇರಳ ಅರಣ್ಯ ಇಲಾಖೆ ಅನು ಮೋದನೆ ನೀಡಬೇಕಾಗಿದ್ದು, ಅದಕ್ಕಾಗಿ ಕಾಯಲಾಗುತ್ತಿದೆ ಎನ್ನ ಲಾಗಿದೆ. 1980ರ ದಶಕದಲ್ಲಿ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಕಾಪ್ಟರ್‌ ಮೂಲಕ ಶಬರಿಮಲೆ ದೇಗುಲಕ್ಕೆ ಭೇಟಿ ನೀಡಲು ಮುಂದಾಗಿದ್ದರು. ಕಾರಣಾಂತರ ಗಳಿಂದ ಇದು ಸಾಧ್ಯವಾಗಿರಲಿಲ್ಲ.

ಗುರುತು ಚೀಟಿ ಕಡ್ಡಾಯ
ಮತ್ತೂಂದು ಮಹತ್ವದ ಬೆಳ ವಣಿಗೆಯಲ್ಲಿ ಕೇರಳ ಪೊಲೀಸ್‌ ಇಲಾಖೆ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲು ನಿರ್ಧರಿಸಿದೆ. ದೇಗುಲಕ್ಕೆ ಭೇಟಿ ನೀಡುವ ಪ್ರತಿ ಯೊಂದು ಖಾಸಗಿ ವಾಹನವನ್ನು ಆಮೂಲಾಗ್ರವಾಗಿ ತಪಾಸಣೆ ನಡೆಸಲು ತೀರ್ಮಾನಿಸಲಾಗಿದೆ. ಇದರ ಜತೆಗೆ ಭಕ್ತರು ಗುರುತಿನ ಚೀಟಿ ಹೊಂದುವುದನ್ನು ಕಡ್ಡಾಯ ಮಾಡಲಾಗಿದೆ.

ಪೊಲೀಸ್‌ ಪಾಸ್‌ ಬೇಕು 
ನೀಲಕ್ಕಲ್‌ನಲ್ಲಿ ನಿಲುಗಡೆ ಬಯಸುವ ವಾಹನಗಳು ಪೊಲೀಸರು ನೀಡುವ ಪಾಸ್‌ಗಳನ್ನು ಕಡ್ಡಾಯ ವಾಗಿ ಹೊಂದಿರಬೇಕು. ಆದರೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದ ಯಾತ್ರಾರ್ಥಿ ಗಳಿಗೆ ಹೇಗೆ ಪಾಸ್‌ ನೀಡಲಾಗುತ್ತದೆ ಎಂಬ ಬಗ್ಗೆ ಸದ್ಯಕ್ಕೆ ಆದೇಶ ದಲ್ಲಿ ಸ್ಪಷ್ಟತೆ ಹೊಂದಿಲ್ಲ. 

48 ಗಂಟೆಗಳು ಮಾತ್ರ
ನೀಲಕ್ಕಲ್‌ನಲ್ಲಿ ಕಾಯ್ದಿರಿಸದ ಟಿಕೆಟ್‌ ನೀಡುವ ಕೇಂದ್ರವನ್ನು ಶೀಘ್ರ ಸ್ಥಾಪಿಸಲಾಗುತ್ತದೆ. ಪ್ರತಿ ಯಾತ್ರಾರ್ಥಿ 48 ಗಂಟೆ ಒಳಗಾಗಿ ನೀಲಕ್ಕಲ್‌ -ಪಂಪಾ- ನೀಲಕ್ಕಲ್‌ ಮೂಲಕವೇ ದೇಗುಲಕ್ಕೆ ಹೋಗಿ ಬರಬೇಕು ಎನ್ನಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.