ಕಳಪೆ ಹೆಲ್ಮೆಟ್‌ ವಿರುದ್ಧ ಕ್ರಮಕ್ಕೆ ಸಚಿನ್‌ ತೆಂಡುಲ್ಕರ್‌ ಆಗ್ರಹ

Team Udayavani, Mar 21, 2018, 7:30 AM IST

ಹೊಸದಿಲ್ಲಿ: ಕಳಪೆ ಹೆಲ್ಮೆಟ್‌ ತಯಾರಕರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ರಾಜ್ಯಸಭಾ ಸದಸ್ಯ ಸಚಿನ್‌ ತೆಂಡುಲ್ಕರ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ. ದ್ವಿ ಚಕ್ರ ವಾಹನ ಸವಾರರ ಸುರಕ್ಷಾ ಅಭಿಯಾನದ ಪ್ರಯುಕ್ತ ಅವರು ಈ ಪತ್ರ ಬರೆದಿದ್ದಾರೆ. ಹೆಚ್ಚಿನ  ಅಪಘಾತ ಪ್ರಕರಣಗಳಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‌ ಧರಿಸದೇ ಸಾವು-ನೋವುಗಳು ಹೆಚ್ಚೆಚ್ಚು ಸಂಭವಿಸಿವೆ. 

ಹೀಗಾಗಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಗುಣಮಟ್ಟದ ಹೆಲ್ಮೆಟ್‌ ಧರಿಸಬೇಕು. ಸುರಕ್ಷತೆ ದೃಷ್ಟಿಯಿಂದ ಇದು ಮುಖ್ಯ. ಈ ಸಂಬಂಧ ನಾನು ಸಚಿವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಕಳಪೆ ಗುಣಮಟ್ಟದ ಹೆಲ್ಮೆಟ್‌ ತಯಾರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಐಎಸ್‌ಐ ಗುಣಮಟ್ಟದಲ್ಲಿದೆಯೇ ಎನ್ನುವುದನ್ನು ಪರೀಕ್ಷಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಾನೊಬ್ಬ ಕ್ರೀಡಾಪಟುವಾಗಿ ಬಳಕೆ ಮಾಡಿರುವ ಹೆಲ್ಮೆಟ್‌ನ ಗುಣಮಟ್ಟ ದ್ವಿಚಕ್ರ ವಾಹನ ಸವಾರರು ಬಳಸುವಂತಾದರೆ ಅಪಘಾತಗಳಲ್ಲಿ ಸಾವು-ನೋವುಗಳು ಕಡಿಮೆಯಾಗಲಿವೆ ಎಂದಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ