ಕ್ಷಮೆಯಾಚಿಸಿರುವ ಸಾಧ್ವಿ ಪ್ರಜ್ಞಾ ಸಿಂಗ್‌ ಆತ್ಮಾವಲೋಕನ, ಕಠಿನ ಮೌನ ವ್ರತ

Team Udayavani, May 20, 2019, 5:42 PM IST

ಭೋಪಾಲ್‌ : ತನ್ನ ಈಚಿನ ಕೆಲವು ವಿವಾದಾತ್ಮಕ ಹೇಳಿಕೆಗಳಿಗಾಗಿ ಕ್ಷಮೆಯಾಚಿಸಿರುವ ಬಿಜೆಪಿಯ ಭೋಪಾಲ್‌ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರು “ಆತ್ಮಾವಲೋಕನಕ್ಕಾಗಿ ನಾನು 63 ತಾಸುಗಳ ಮೌನ ವ್ರತ ಆಚರಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ.

2008ರ ಮಾಲೇಗಾಂವ್‌ ಬ್ಲಾಸ್ಟ್‌ ಆರೋಪಿಗಳಲ್ಲಿ ಒಬ್ಬರಾಗಿರುವ ಸಾಧ್ವಿ ಪ್ರಜ್ಞಾ ಅವರು “ನಾನು ನೀಡಿರುವ ಕೆಲವು ಹೇಳಿಕೆಗಳ ಬಗ್ಗೆ ನನಗೆ ಖೇದವಿದೆ; ಅದಕ್ಕಾಗಿ ಆತ್ಮಾವಲೋಕನ ಮಾಡುತ್ತಿದ್ದೇನೆ’ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

‘ಚುನಾವಣೆ ಪ್ರಕ್ರಿಯೆಗಳು ಮುಗಿದಿದ್ದು ಈಗ ಆತ್ಮಾವಲೋಕನ ಮಾಡಿಕೊಳ್ಳುವ ಕಾಲ ಒದಗಿದೆ. ದೇಶ ಪ್ರೇಮಿಗಳಿಗೆ ನನ್ನ ಹೇಳಿಕೆಯಿಂದ ನೋವಾಗಿದ್ದರೆ ನಾನು ಕ್ಷಮೆ ಕೋರುತ್ತೇನೆ; ಅದಕ್ಕಾಗಿ ನಾನು ಅತ್ಯಂತ ಕಠಿನ ಮೌನ ವ್ರತವನ್ನು ಆಚರಿಸುತ್ತಿದ್ದೇನೆ’ ಎಂದು ಸಾಧ್ವಿ ಹೇಳಿದ್ದಾರೆ.

‘ಮಹಾತ್ಮಾ ಗಾಂಧಿಯವರ ಹಂತಕ ನಾಥೂರಾಮ್‌ ಗೋಡ್ಸೆ ದೇಶಪ್ರೇಮಿ’ ಎಂದು ಸಾಧ್ವಿ ಹೇಳಿದ್ದ ಮಾತು ವ್ಯಾಪಕ ಟೀಕೆ, ಖಂಡನೆಗೆ ಗುರಿಯಾಗಿತ್ತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ತಾನು ‘ಸಾಧ್ವಿ ಅವರನ್ನು ಕ್ಷಮಿಸಲಾರೆ’ ಎಂದಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮಂಗಳೂರು: ಕುಲಶೇಖರದಿಂದ ಮೂಡುಬಿದಿರೆ- ಕಾರ್ಕಳ ನಡುವಿನ ಸುಮಾರು 60 ಕಿ.ಮೀ. ದೂರದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಮತ್ತೂಮ್ಮೆ ಭೂಸ್ವಾಧೀನ ಪ್ರಕ್ರಿಯೆ...

  • ಕನ್ನಡ ದೃಶ್ಯ ಜಗತ್ತನ್ನು ಕಲಾತ್ಮಕವಾಗಿ ಶ್ರೀಮಂತಗೊಳಿಸಿದ ಕೆಲವೇ ಕೆಲವು ನಿರ್ದೇಶಕರ ಪೈಕಿ ಗಿರೀಶ್‌ ಕಾಸರವಳ್ಳಿ ಕೂಡ ಒಬ್ಬರು. ಚೊಚ್ಚಲ ನಿರ್ದೇಶನ, "ಘಟಶ್ರಾದ್ಧ'...

  • ಬೆಂಗಳೂರು: ರಾಜ್ಯಾದ್ಯಂತ ಅನುಷ್ಠಾನದಲ್ಲಿರುವ ಶುದ್ಧ ಕುಡಿಯುವ ನೀರು ಘಟಕಗಳ ಕಾರ್ಯನಿರ್ವಹಣೆ ಸಂಬಂಧ ಸೂಕ್ತ ನಿಯಮಾವಳಿ ರೂಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ....

  • ರಘುರಾಮನು ವನರಾಮನಾಗಿ ಆರಾಮದಿಂದ ಇದ್ದ ಸ್ಥಳವೇ ಚಿತ್ರಕೂಟ. ರಾಮ, ಲಕ್ಷ¾ಣ, ಸೀತೆಯರ ಚಿತ್ತಾಪಹಾರ ಮಾಡಿದ್ದ ಚಿತ್ರಕೂಟವು ಪ್ರವಾಸಿಗರ ಚಿತ್ತವನ್ನೂ ಅಪಹರಿಸುವಷ್ಟು...

  • ಮಂಗಳೂರು: ಪಾಶ್ಚಾತ್ಯ ಪ್ರಭಾವದಿಂದಾಗಿ ಭಾರತೀಯ ಸಂಗೀತವು ಸ್ವಲ್ಪ ಮಂಕಾಗಿ ಕಂಡರೂ ಮತ್ತೆ ಚಿಗುರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|...