ಬಿಜೆಪಿ ಸೇರಿದ ಸಾಧ್ವಿ ಪ್ರಗ್ಯಾ ಥಾಕೂರ್ ; ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧೆ ಸಾಧ್ಯತೆ
ಚುನಾವಣೆಯಲ್ಲಿ ಸ್ಪರ್ಧಿಸುವೆ ; 'ಧರ್ಮ ಯುದ್ಧ' ಪ್ರಾರಂಭವಾಗಿದೆ...
Team Udayavani, Apr 17, 2019, 1:58 PM IST
ಭೋಪಾಲ್: ಸಾಧ್ವಿ ಪ್ರಗ್ಯಾ ಥಾಕೂರ್ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ವಿಶ್ವಾಸವನ್ನೂ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ.
ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳುವ ಮೊದಲು ಪ್ರಗ್ಯಾ ಅವರು ರಾಜ್ಯದ ಹಿರಿಯ ಬಿಜೆಪಿ ನಾಯಕರಾದ ಶಿವರಾಜ್ ಸಿಂಗ್ ಚೌಹಾಣ್, ರಾಮ್ ಲಾಲ್ ಮತ್ತು ಪ್ರಭಾತ್ ಝಾ ಅವರನ್ನು ಭೋಪಾಲದಲ್ಲಿರುವ ಪಕ್ಷದ ಕಛೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಆ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಬಾರಿ ಭೋಪಾಲದಲ್ಲಿ ಚುನಾವಣೆ ರಾಷ್ಟ್ರೀಯತೆಯ ವಿಚಾರದ ಮೇಲೆ ನಡೆಯಲಿದ್ದು ಮತ್ತಿದು ‘ಧರ್ಮಯುದ್ಧ’ದ ಪ್ರಾರಂಭ ಎಂದು ಹೇಳಿದ್ದಾರೆ. ಮತ್ತು ಪಕ್ಷ ಬಯಸಿದರೆ ತಾನು ಭೋಪಾಲದಲ್ಲಿ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಸ್ಪರ್ಧಿಸಲು ಸಿದ್ಧ ಎಂಬ ಮಾತನ್ನೂ ಸಹ ಪ್ರಗ್ಯಾ ಥಾಕೂರ್ ಅವರು ಇದೇ ಸಂದರ್ಭದಲ್ಲಿ ಮಾಧ್ಯಮದವರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!