ಅಪರಿಚಿತ ದುಷ್ಕರ್ಮಿಗಳ ಗುಂಡಿನ ದಾಳಿಗೆ ಸಮಾಜವಾದಿ ಪಕ್ಷದ ಮುಖಂಡ ಬಲಿ
Team Udayavani, May 31, 2019, 6:42 PM IST
Image: Facebook/Ramtek Katariya
ನೋಯ್ಡಾ:ಅಪರಿಚಿತ ದುಷ್ಕರ್ಮಿಗಳ ಗುಂಡಿನ ದಾಳಿಗೆ ಸಮಾಜವಾದಿ ಪಕ್ಷದ ಮುಖಂಡ ಬಲಿಯಾಗಿರುವ ಘಟನೆ ಗ್ರೇಟರ್ ನೋಯ್ಡಾದ ದಾದ್ರಿ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಾಮ್ ಟೆಕ್ ಕಟಾರಿಯಾ ಸಮಾಜವಾದಿ ಪಕ್ಷದ ದಾದ್ರಿ ಅಸೆಂಬ್ಲಿ ವಲಯದ ಅಧ್ಯಕ್ಷ. ಮೇಲ್ನೋಟಕ್ಕೆ ಇದೊಂದು ರಾಜಕೀಯ ದ್ವೇಷದ ಕೊಲೆ ಅಲ್ಲ ಎಂಬುದನ್ನು ತಳ್ಳಿಹಾಕುವಂತಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ದಾದ್ರಿಯ ಜಾರ್ಚಾ ರಸ್ತೆ ಸಮೀಪದ ಮನೆ ಬಳಿಯೇ ಈ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾರಿನಲ್ಲಿ ಆಗಮಿಸಿದ್ದ ನಾಲ್ಕು ಮಂದಿ ದುಷ್ಕರ್ಮಿಗಳು, ಏಕಾಏಕಿ ಐದು ಗುಂಡುಗಳನ್ನು ರಾಮ್ ಟೆಕ್ ಮೇಲೆ ಹಾರಿಸಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು, ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online ಮೂಲಕ ಸಲ್ಲಿಸುವ ಜೀವನ ಪ್ರಮಾಣಪತ್ರಕ್ಕೆ ಫೇಸ್ ರೆಕಗ್ನಿಷನ್ ಇನ್ನು ಅಧಿಕೃತ ಪುರಾವೆ
ಶಾಲೆಗೆ ಬಣ್ಣ ಬಳಿಯುವ ವಿಚಾರದಲ್ಲಿ ಜೆಎಂಎಂ-ಬಿಜೆಪಿ ವರ್ಣ ಕದನ
ವಸುಂಧರಾ ಇಲ್ಲದೆ ನಡೆಯಲಿದೆ ಚುನಾವಣೆ? ರಾಜ್ಯ ಬಿಜೆಪಿ ಅಧ್ಯಕ್ಷರು ಹೇಳಿದೆನು?
ಮಳೆಗೆ ಬಳಲಿದ ಅಸ್ಸಾಂ; ನಿಲ್ಲದ ಪ್ರವಾಹ ಪ್ರಕೋಪ; ರಕ್ಷಣಾ ಕಾರ್ಯ
ಇ-ವಾಹನ ಬಳಕೆಗೆ ಮುಂದಾದ ಮೆಘಾಲಯ ಸಿಎಂ ಕಾನ್ರಾಡ್ ಸಂಗ್ಮಾ