ಸರ್ದಾರ್ಜಿ ಜೋಕ್ ತಡೆಗಟ್ಟಲು ಅಸಾಧ್ಯ; ಸುಪ್ರೀಂಕೋರ್ಟ್
Team Udayavani, Feb 8, 2017, 12:46 PM IST
ನವದೆಹಲಿ: ಸಿಖ್ ಸಮುದಾಯವನ್ನು ಲೇವಡಿ ಮಾಡುವ ಜೋಕ್ಸ್‌ಗಳಿಗೆ ನಿಷೇಧ ಹೇರಲು ಸಾಧ್ಯವಿಲ್ಲ. ಅದನ್ನು ತಡೆಯಲು ನಿಯಮಗಳನ್ನು ಜಾರಿ ಮಾಡುವ ಮೂಲಕ ನೈತಿಕ ಮಾರ್ಗದರ್ಶನ ನೀಡಲು ಸಾಧ್ಯವಿಲ್ಲ . ಒಂದು ವೇಳೆ ಅಂಥ ಆದೇಶ ನೀಡಿದರೂ ಅದನ್ನು ಜಾರಿಗೊಳಿಸುವವರು ಯಾರೆಂದು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.
ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಮತ್ತು ಆರ್.ಭಾನುಮತಿ ನೇತೃತ್ವದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಸಮುದಾಯವನ್ನು ಗುರಿಯಾಗಿಸಿಕೊಂಡು ಲೇವಡಿ ಮಾಡುವಂಥ ಜೋಕ್ಸ್ ಗಳು ಇವೆ. ಎಸ್‌ಎಂಎಸ್, ಇಂಟರ್‌ನೆಟ್‌ಗಳಲ್ಲಿ ಅವುಗಳು ಹರಿದಾಡುತ್ತಿವೆ.
ಅವುಗಳನ್ನು ನಿಷೇಧಿಸುವಂತೆ ಅಮೃತಸರದ ಶಿರೋಮಣಿ ಗುರುದ್ವಾರಾ ಪ್ರಬಂಧಕ ಸಮಿತಿ ಸೇರಿದಂತೆ ಹಲವು ಸಿಖ್ ಸಂಘಟನೆಗಳು ಕಳೆದ ವರ್ಷದ ಮಾರ್ಚ್‌ನಲ್ಲಿ ಸುಪ್ರೀಂಕೋರ್ಟಿಗೆ ಅರಿಕೆ ಮಾಡಿಕೊಂಡಿದ್ದವು.
ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶಾಖಾ ಪ್ರಕರಣದಂತೆ ಈ ಜೋಕ್ಸ್‌ಗಳ ವಿಚಾರವನ್ನೂ ಪರಿಗಣಿಸಬೇಕು ಎಂದು ಸಂಘಟನೆಗಳ ವಾದವನ್ನು ಸುಪ್ರೀಂಕೋರ್ಟ್ ಒಪ್ಪಲಿಲ್ಲ. ಇಂಥ ಪ್ರಕರಣಗಳ ವಿರುದ್ಧ ಹೋರಾಡಿ ಗೌರವಕ್ಕೆ ಚ್ಯುತಿ ತಂದುಕೊಳ್ಳಬೇಡಿ ಎಂದಿತು.
*ನಿಯಮಗಳ ಬಗ್ಗೆ ಆದೇಶ ಸುಲಭ; ಅನುಷ್ಠಾನ ಕಷ್ಟ
*ವಿಶಾಖಾ ಪ್ರಕರಣ, ಜೋಕ್ಸ್ ವಿವಾದ ಬೇರೆ ಬೇರೆ
*ಇಂಥ ಪ್ರಕರಣಗಳ ವಿರುದ್ಧ ಕಾನೂನು ಹೋರಾಟ ನಡೆಸಿ ಚ್ಯುತಿ ತಂದುಕೊಳ್ಳಬೇಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ