ಆಸ್ಪತ್ರೆಗೆ ತೆರಳಿ ಪತಿ ಭೇಟಿ ಮಾಡಿದ ಶಶಿಕಲಾ
Team Udayavani, Oct 8, 2017, 6:20 AM IST
ಚೆನ್ನೈ: ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ಪರೋಲ್ ಮೇಲೆ ಬಿಡುಗಡೆಯಾಗಿರುವ ಅಣ್ಣಾಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಶನಿವಾರ ಚೆನ್ನೈನ ಆಸ್ಪತ್ರೆಗೆ ಭೇಟಿ ನೀಡಿ ಪತಿಯ ಆರೋಗ್ಯ ವಿಚಾರಿಸಿದ್ದಾರೆ.
ಮೂತ್ರಪಿಂಡ ಕಸಿಯ ನಂತರ ಪತಿ ಎಂ ನಟರಾಜನ್ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸುಮಾರು 2 ಗಂಟೆ ಇದ್ದು, ಪತಿಯ ಯೋಗಕ್ಷೇಮ ವಿಚಾರಿಸಿದರು ಎಂದು ಮೂಲಗಳು ತಿಳಿಸಿವೆ. ಬಳಿಕ ಅವರು ತಮ್ಮ ಸೋದರ ಸಂಬಂಧಿ ಕೃಷ್ಣಪ್ರಿಯಾ ಅವರ ನಿವಾಸಕ್ಕೆ ತೆರಳಿದ್ದಾರೆ. ದಾರಿ ಮಧ್ಯೆ ಕೊಟ್ಟೂರುಪುರಂನಲ್ಲಿನ ಗಣೇಶ ದೇವಸ್ಥಾನದ ಮುಂದೆ ಕಾರು ನಿಲ್ಲಿಸಿ, ಕಾರಿನೊಳಗಿಂದಲೇ ಪೂಜೆ ಸಲ್ಲಿಸಿದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್