ವಾದ್ರಾ ಕಂಪೆನಿ ಅರ್ಜಿ ತಿರಸ್ಕರಿಸಿದ ಸುಪ್ರೀಂ
Team Udayavani, Apr 7, 2018, 9:30 AM IST
ಹೊಸದಿಲ್ಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾಗೆ ಸಂಬಂಧಿಸಿದ ಸ್ಕೈ ಲೈಟ್ ಹಾಸ್ಪಿಟಾಲಿಟಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ. 2010-11ರಲ್ಲಿ ಹರ್ಯಾಣ, ರಾಜಸ್ಥಾನದಲ್ಲಿ ಭೂ ವಹಿವಾಟಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ವಿವರಗಳನ್ನು ಮರುಪರಿಶೀಲನೆ ನಡೆಸುವಂತೆ ಆದಾಯ ತೆರಿಗೆ ಇಲಾಖೆ ನೀಡಿದ್ದ ನೊಟೀಸ್ ರದ್ದುಗೊಳಿಸಬೇಕೆಂದು ಕೋರಿ ಸ್ಕೈಲೈಟ್ ಹಾಸ್ಪಿಟಾಲಿಟಿ ಸುಪ್ರೀಂ ಮೊರೆ ಹೋಗಿತ್ತು.