ಆಫ್ ಲೈನ್‌ ಪರೀಕ್ಷೆ: ಕೇರಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್‌ ತಡೆ

ಕೋವಿಡ್‌19 ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ

Team Udayavani, Sep 3, 2021, 8:33 PM IST

ಆಫ್ ಲೈನ್‌ ಪರೀಕ್ಷೆ: ಕೇರಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ಕೇರಳದಲ್ಲಿ ಕೋವಿಡ್‌-19 ಸೋಂಕು ಪ್ರಕರಣ ಹೆಚ್ಚುತ್ತಿರುವುದರಿಂದ ಸೆ.06ರಿಂದ ಆರಂಭವಾಗಲಿರುವ 11ನೇ ತರಗತಿಯ ಆಫ್ ಲೈನ್‌ ಪರೀಕ್ಷೆಯನ್ನು ನಡೆಸುವ ಕೇರಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ಒಂದು ವಾರದವರೆಗೆ ತಡೆ ನೀಡಿದೆ.

ಕೋವಿಡ್‌-19 ಕಾರಣದಿಂದ ರಾಜ್ಯದಲ್ಲಿ ಆತಂಕಕಾರಿ ಪರಿಸ್ಥಿತಿ ಇದೆ. ದೇಶದ ಶೇ.70ರಷ್ಟು ಪ್ರಕರಣಗಳು ಕೇರಳದಲ್ಲಿ ವರದಿಯಾಗುತ್ತಿದ್ದು, ಈ ವಯಸ್ಸಿನ ಮಕ್ಕಳನ್ನು ಈ ಅಪಾಯಕ್ಕೆ ಸಿಲುಕಬಾರದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಈ ವರ್ಷ ಸೆಪ್ಟೆಂಬರ್‌ ನಲ್ಲಿ ಪರೀಕ್ಷೆಯನ್ನು ನಡೆಸುವ ಮೊದಲು ರಾಜ್ಯ ಸರ್ಕಾರ ಪ್ರಚಲಿತ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅರ್ಜಿದಾರರು ಸಲ್ಲಿಸಿರುವ ಅರ್ಜಿಯಲ್ಲಿ ಮೇಲ್ನೊಟಕ್ಕೆ ಕಂಡು ಬರುತ್ತದೆ. ಈ ಸಂಬಂಧ ಸರ್ಕಾರದ ಪರ ವಕೀಲರಿಂದ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಿಚಾರಣೆಯವರೆಗೂ ಆಫ್ ಲೈನ್‌ ಪರೀಕ್ಷೆ ನಡೆಸದಂತೆ ಮಧ್ಯಂತರ ಆದೇಶ ನೀಡುವುದಾಗಿ ನ್ಯಾಯಮೂರ್ತಿ ಗಳಾದ ಎ.ಎಂ.ಖಾನ್ವಿಲ್‌ ಕರ್‌,ಹೃಷಿಕೇಶ್‌ ರಾಯ್‌ ಮತ್ತು ಸಿ.ಟಿ.ರವಿಕುಮಾರ್‌ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು.

ಇದನ್ನೂ ಓದಿ:ಪ್ರಧಾನಿ ಮೋದಿ ಮನೆಯಂಗಳದಲ್ಲಿ ಕೇರಳದ ಪುಟಾಣಿ ಉಡುಗೊರೆಯಾಗಿ ನೀಡಿದ ಪೇರಳೆ ಗಿಡ

ಸುಪ್ರೀಂ ಕೋರ್ಟ್‌ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್‌ 13 ಕ್ಕೆ ಮುಂದೂಡಿದೆ.

ಆಫ್ ಲೈನ್‌ ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಕ್ಕೆ ಹೈಕೋರ್ಟ್‌ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ವಕೀಲ ರಸೂಲ್ಯನ್‌ ಅವರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಇದೀಗ ಸುಪ್ರೀಂಕೋರ್ಟ್‌ ಮಧ್ಯಂತರ ಆದೇಶ ನೀಡಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.