ಏನೇನಾಯ್ತು: ಅತೃಪ್ತ ಶಾಸಕರ ಅರ್ಜಿ ವಿಚಾರಣೆ, ನಾಳೆ ಬೆಳಗ್ಗೆ “ಸುಪ್ರೀಂ” ತೀರ್ಪು ಪ್ರಕಟ

Team Udayavani, Jul 16, 2019, 3:45 PM IST

ನವದೆಹಲಿ: ಕಾಂಗ್ರೆಸ್, ಜೆಡಿಎಸ್ ನ ಅತೃಪ್ತ ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ವಾದ, ಪ್ರತಿವಾದ ಆಲಿಸಿದ ಸಿಜೆಐ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಬುಧವಾರ ಬೆಳಗ್ಗೆ 10-30ಕ್ಕೆ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.

ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಹಾಗೂ ಅನರ್ಹತೆ ಕುರಿತು ನಾಳೆ ಬೆಳಗ್ಗೆವರೆಗೂ ಯಥಾಸ್ಥಿತಿ ಮುಂದುವರಿಯಲಿದೆ ಎಂದು ಸುಪ್ರೀಂ ಪೀಠ ಈ ಸಂದರ್ಭದಲ್ಲಿ ಸೂಚನೆ ನೀಡಿದೆ.

ಇಂದು ಬೆಳಗ್ಗೆ ಹತ್ತು ಮಂದಿ ಅತೃಪ್ತ ಶಾಸಕರ ಕುರಿತು ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದರು. ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಕೂಡಲೇ ಅಂಗೀಕರಿಸಬೇಕು ಎಂದು ವಾದಿಸಿದ್ದರು.

ಅತೃಪ್ತ ಶಾಸಕರ ಪರ ಮುಕುಲ್ ರೋಹ್ಟಗಿ ವಾದ ಮಂಡನೆ ಮುಕ್ತಾಯವಾದ ನಂತರ ಸ್ಪೀಕರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಪ್ರತಿವಾದ ಮಂಡಿಸಿದ್ದರು.

ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡ ಇದೆ. ಸ್ಪೀಕರ್ ಅವರು ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ ಎಂದು ಸಿಂಘ್ವಿ ಪ್ರತಿವಾದ ಮಂಡಿಸಿದ್ದರು.

ಶಾಸಕರು ರಾಜೀನಾಮೆ ನೀಡಿ ಇಷ್ಟು ದಿನ ಕಳೆದರೂ ಸ್ಪೀಕರ್ ರಾಜೀನಾಮೆ ಯಾಕೆ ಸ್ವೀಕರಿಸಿಲ್ಲ. ನಾವು ಸ್ಪೀಕರ್ ಅವರ ಕಾರ್ಯವ್ಯಾಪ್ತಿಯನ್ನು ಪ್ರಶ್ನಿಸುವುದಿಲ್ಲ. ಆದರೆ ನೀವು ನಿಮ್ಮ ಅನುಕೂಲತೆಗೆ ತಕ್ಕಂತೆ ನಮ್ಮನ್ನು ಪ್ರಶ್ನಿಸುವಂತಿಲ್ಲ ಎಂದು ಸಿಜೆಐ ಅಭಿಪ್ರಾಯವ್ಯಕ್ತಪಡಿಸಿದ್ದರು.

ಭೋಜನ ವಿರಾಮದ ನಂತರ ಸಿಎಂ ಕುಮಾರಸ್ವಾಮಿ ಪರ ವಕೀಲರಾದ ರಾಜೀವ್ ಧವನ್ ವಾದ ಮಂಡಿಸಿ, ಶಾಸಕರು ಸಚಿವರಾಗುವ ಆಮಿಷಕ್ಕೊಳಗಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕರ ರಾಜೀನಾಮೆ ಪ್ರಜಾಪ್ರಭುತ್ವದ ಬುಡವನ್ನೇ ಅಲುಗಾಡಿಸುತ್ತಿದೆ. ಗುರುವಾರ ಅಧಿವೇಶನ ನಡೆಯಲಿದ್ದು, ಅಂದು ಹಣಕಾಸು ವಿಧೇಯಕ ಮಂಡನೆಯಾಗಲಿದೆ. ಇಂತಹ ಸಂದರ್ಭದಲ್ಲಿ ಶಾಸಕರು ಸರ್ಕಾರವನ್ನು ಬೀಳಿಸುವ ಯೋಜನೆ ರೂಪಿಸಿದ್ದಾರೆ. ಹೀಗಾಗಿ ಇಂತಹ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಬಾರದು ಎಂದು ವಾದ ಮಂಡಿಸಿದ್ದರು.

ಸುದೀರ್ಘವಾಗಿ ವಾದ, ಪ್ರತಿವಾದ ಆಲಿಸಿದ ಸಿಜೆಐ ನೇತೃತ್ವದ ಸುಪ್ರೀಂಕೋರ್ಟ್ ಪೀಠ ತೀರ್ಪನ್ನು ಕಾಯ್ದಿರಿಸಿದ್ದು, ಬುಧವಾರ ಬೆಳಗ್ಗೆ 10-30ಕ್ಕೆ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ