ಹೊಸ ಡ್ರೋನ್‌ ನಿಯಮಗಳು ಜಾರಿ

ಸರಳೀಕೃತ ನಿಯಮಗಳ ಮೂಲಕ ಕ್ಷೇತ್ರ ಬೆಳವಣಿಗೆಗೆ ಒತ್ತು

Team Udayavani, Aug 26, 2021, 11:15 PM IST

ಹೊಸ ಡ್ರೋನ್‌ ನಿಯಮಗಳು ಜಾರಿ

ನವದೆಹಲಿ: ಇದೇ ವರ್ಷ ಮಾರ್ಚ್‌ನಲ್ಲಿ ಜಾರಿಗೊಂಡಿದ್ದ ಅನ್‌ಮ್ಯಾನ್ಡ್ ಏರ್‌ಕ್ರಾಫ್ಟ್ ಸಿಸ್ಟಂ (ಯು.ಎ.ಎಸ್‌) ನಿಯಮಗಳನ್ನು ನೇಪಥ್ಯಕ್ಕೆ ಸರಿಸಿ, ಹೊಸ 2021ರ ಡ್ರೋನ್‌ ನಿಯಮಾವಳಿಗಳನ್ನು ರೂಪಿಸಿದ್ದ ಕೇಂದ್ರ ಸರ್ಕಾರ, ಈ ಹೊಸ ನಿಯಮಗಳನ್ನು ಬುಧವಾರದಿಂದ ಅನುಷ್ಠಾನಗೊಳಿಸಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಡ್ರೋನ್‌ ನಿಯಮಗಳ ಸರಳೀಕರಣದ ಮೂಲಕ ಈ ಕ್ಷೇತ್ರದ ಬೆಳವಣಿಗೆಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಹೊಸ ಸ್ಟಾರ್ಟ್‌ಅಪ್‌ಗ್ಳಿಗೆ ಹಾಗೂ ಹೊಸ ಆವಿಷ್ಕಾರಗಳಿಗೆ ಸಹಾಯವಾಗುತ್ತದೆ. ನಂಬಿಕೆಯ ಆಧಾರದಲ್ಲಿ ಈ ಕ್ಷೇತ್ರವನ್ನು ಬೆಳೆಸುವ ಸದುದ್ದೇಶವೂ ಇದೆ ಎಂದಿದ್ದಾರೆ.

ಇದನ್ನೂ ಓದಿ:ವಾಯುಭಾರ ಕುಸಿತ : ಆ.29, 30ರಂದು ರಾಜ್ಯದ ಆರು ಜಿಲ್ಲೆಗಳಿಗೆ ಹೈ ಅಲರ್ಟ್‌

ಐದು ಪ್ರಮುಖ ಬದಲಾವಣೆಗಳು
1. ಡ್ರೋನ್‌ ಹಾರಾಟಕ್ಕಾಗಿ ಪಡೆಯಬೇಕಾದ ರಿಮೋಟ್‌ ಪೈಲಟ್‌ ಲೈಸನ್ಸ್‌ಗಾಗಿ ವಿಧಿಸಲಾಗಿದ್ದ ಶುಲ್ಕವನ್ನು 3,000 ರೂ.ಗಳಿಂದ 100 ರೂ.ಗೆ ಇಳಿಸಲಾಗಿದೆ.
2. ನಾನಾ ಕಡೆಗಳಿಂದ ಒಪ್ಪಿಗೆ ಪಡೆಯುವ ಪ್ರಕ್ರಿಯೆಗೆ ಬ್ರೇಕ್‌ ಹಾಕಿ, ಸರಳವಾಗಿ, ಸುಲಭವಾಗಿ ಒಪ್ಪಿಗೆ ಅಥವಾ ಪ್ರಮಾಣಪತ್ರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
3. ಹಸಿರು ವಲಯಗಳಲ್ಲಿ, ನೆಲದಿಂದ 400 ಅಡಿಗಳವರೆಗೆ ಹಾರಾಟ ನಡೆಸಬಹುದಾದ ಡ್ರೋನ್‌ಗಳಿಗೆ ಫ್ಲೈಟ್‌ ಅನುಮತಿ ಕಡ್ಡಾಯವಾಗಿರುವುದಿಲ್ಲ ಎಂದು ಹೊಸ ನಿಯಮಗಳು ಹೇಳುತ್ತವೆ.
4. ವಿಮಾನ ನಿಲ್ದಾಣಗಳಿಂದ ಸುತ್ತ 8ರಿಂದ 12 ಕಿ.ಮೀ. ವಲಯದಲ್ಲಿ ನೆಲದಿಂದ 200 ಅಡಿ ಎತ್ತರದವರೆಗಿನ ಡ್ರೋನ್‌ ಹಾರಾಟಕ್ಕೂ ಫ್ಲೈಟ್‌ ಅನುಮತಿ ಬೇಡ ಎಂದು ಹೇಳಲಾಗಿದೆ.
5. ಡ್ರೋನ್‌ ಸೇವೆ ನೀಡುವ ಕಂಪನಿಗಳ ನೋಂದಣಿಗಾಗಿ ಈವರೆಗೆ 25 ವಿವಿಧ ಅರ್ಜಿಗಳನ್ನು ತುಂಬಬೇಕಿದ್ದು, ಅವನ್ನು 5ಕ್ಕೆ ಇಳಿಸಲಾಗಿದೆ. ಹಾಗೆಯೇ, ನೋಂದಣಿ ಪ್ರಕ್ರಿಯೆಯಲ್ಲಿ ಸರ್ಕಾರಕ್ಕೆ ಕಟ್ಟಬೇಕಿದ್ದ 74 ರೀತಿಯ ಶುಲ್ಕಗಳನ್ನು 4ಕ್ಕೆ ಇಳಿಸಲಾಗಿದೆ.

ಏರ್‌ ಟ್ಯಾಕ್ಸಿಗೆ ವಿಪುಲ ಅವಕಾಶ: ಸಿಂದಿಯಾ
“ಹೊಸ ಡ್ರೋನ್‌ ನಿಯಮಗಳಿಂದಾಗಿ, ಮುಂದಿನ ದಿನಗಳಲ್ಲಿ ಏರ್‌ ಟ್ಯಾಕ್ಸಿ ಸೇವೆಗಳು ಲಭ್ಯವಾಗಲಿವೆ” ಎಂದು ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ತಿಳಿಸಿದ್ದಾರೆ. “ಸದ್ಯಕ್ಕೆ ಏರ್‌ ಟ್ಯಾಕ್ಸಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಜಗತ್ತಿನ ಹಲವು ರಾಷ್ಟ್ರಗಳು ನಿರ್ಧರಿಸಿವೆ. ಹೊಸ ಡ್ರೋನ್‌ ನಿಯಮಗಳನ್ನು ಜಾರಿಗೊಳಿಸುವ ಮೂಲಕ ಅಂಥ ಸೌಕರ್ಯಕ್ಕೆ ರತ್ನಗಂಬಳಿ ಹಾಸಿವೆ” ಎಂದಿದ್ದಾರೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.