ಶಿವಸೇನಾ, ಎನ್ ಸಿಪಿ, ಕಾಂಗ್ರೆಸ್ ಸರ್ಕಾರ ರಚಿಸಿ, 5 ವರ್ಷ ಪೂರ್ಣಗೊಳಿಸ್ತೇವೆ; ಪವಾರ್

Team Udayavani, Nov 15, 2019, 3:13 PM IST

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನಾ, ಎನ್ ಸಿಪಿ ಮತ್ತು ಕಾಂಗ್ರೆಸ್ ಸರ್ಕಾರ ರಚಿಸಲಿದೆ. ಅಷ್ಟೇ ಅಲ್ಲ ಐದು ವರ್ಷಗಳ ಕಾಲ ಪೂರ್ಣಾವಧಿ ಸರ್ಕಾರ ಕೊಡುವುದಾಗಿ ಎನ ಸಿಪಿ ವರಿಷ್ಠ ಶರದ್ ಪವಾರ್ ಶುಕ್ರವಾರ ತಿಳಿಸಿದ್ದಾರೆ.

ಕಳೆದ ತಿಂಗಳು ಚುನಾವಣಾ ಫಲಿತಾಂಶ ಘೋಷಣೆಯಾದ ನಂತರ ಯಾವ ಪಕ್ಷವೂ ಸರ್ಕಾರ ರಚಿಸಲು ಸಫಲವಾಗದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲ ಎಂದು ಪವಾರ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ನಾವು ಮೂರು ಪಕ್ಷಗಳು ಕನಿಷ್ಠ ಅಜೆಂಡಾಕ್ಕೆ ಒಪ್ಪಿಗೆ ಸೂಚಿಸಿದ್ದೇವೆ. ಅಷ್ಟೇ ಅಲ್ಲ ಶನಿವಾರ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆ ಬಗ್ಗೆ ಹಕ್ಕು ಮಂಡಿಸುವುದಾಗಿ ಮತ್ತೊಬ್ಬ ಹಿರಿಯ ಎನ್ ಸಿಪಿ ಮುಖಂಡ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಐದು ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆ ಶಿವಸೇನಾಕ್ಕೆ ನೀಡಲಾಗಿದೆಯೇ ಎಂಬ ಕುರಿತು ಪವಾರ್ ಅವರನ್ನು ಪ್ರಶ್ನಿಸಿದಾಗ, ಒಂದು ವೇಳೆ ಯಾರಾದರೂ ಮುಖ್ಯಮಂತ್ರಿ ಹುದ್ದೆಗೆ ಹಾಗೆ ಬೇಡಿಕೆ ಇಟ್ಟಲ್ಲಿ, ನಾವು ಕೂಡಾ ಅದರ ಬಗ್ಗೆ ಆಲೋಚಿಸುತ್ತೇವೆ ಎಂದು ಪವಾರ್ ಹೇಳಿದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ