ಬಿಜೆಪಿ ಹಿರಿಯ ಮುಖಂಡ, ಗೋಂಡಾ ಕ್ಷೇತ್ರದ ಮಾಜಿ ಸಂಸದ ಸತ್ಯದೇವ್ ಕೋವಿಡ್ ನಿಂದ ಸಾವು
1996ರಲ್ಲಿ ಬಲರಾಮ್ ಪುರ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಿ ಜಯ
Team Udayavani, Dec 17, 2020, 2:48 PM IST
ನವದೆಹಲಿ:ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ, ಮಾಜಿ ಸಂಸದ ಸತ್ಯದೇವ್ ಸಿಂಗ್ ಕೋವಿಡ್ 19 ಸೋಂಕಿನಿಂದ ಬುಧವಾರ(ಡಿಸೆಂಬರ್ 16, 2020) ರಾತ್ರಿ ನಿಧನರಾಗಿರುವುದಾಗಿ ವರದಿ ತಿಳಿಸಿದೆ.
ಭಾರತೀಯ ಜನತಾ ಪಕ್ಷದ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷರಾಗಿದ್ದ ಸತ್ಯದೇವ್ ಸಿಂಗ್ ಅವರನ್ನು ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಗುರ್ಗಾಂವ್ ನ ಮೇದಾಂತ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿರುವುದಾಗಿ ಮೂಲಗಳು ಹೇಳಿವೆ.
ಕೆಲವು ದಿನಗಳ ಹಿಂದಷ್ಟೇ ಸತ್ಯದೇವ್ ಸಿಂಗ್ ಅವರ ಆರೋಗ್ಯ ಪರೀಕ್ಷೆ ನಡೆಸಿದಾಗ ಕೋವಿಡ್ 19 ಸೋಂಕು ಪತ್ತೆಯಾಗಿತ್ತು. 1977ರಲ್ಲಿ ಸತ್ಯದೇವ್ ಅವರು ಭಾರತೀಯ ಲೋಕ್ ದಳ ಟಿಕೆಟ್ ನಿಂದ ಗೋಂಡಾ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ಇದನ್ನೂ ಓದಿ:ಬೋನಸ್ ನೀಡುವಂತೆ ಆಗ್ರಹಿಸಿ ಆಂಟನಿ ವೇಸ್ಟ್ ನೌಕರರಿಂದ ಪ್ರತಿಭಟನೆ
ಅದೇ ರೀತಿ 1991 ಮತ್ತು 1996ರಲ್ಲಿ ಬಲರಾಮ್ ಪುರ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಿ ಜಯ ಸಾಧಿಸಿದ್ದರು. 1980ರಿಂದ 1985ರವರೆಗೆ ಸತ್ಯದೇವ್ ಅವರು ಭಾರತೀಯ ಜನತಾ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ