ಕಾಂಗ್ರೆಸ್ ಹಿರಿಯ ನಾಯಕ,ಮಾಜಿ ಸಚಿವ ಗುರುದಾಸ್ ಕಾಮತ್ ವಿಧಿವಶ
Team Udayavani, Aug 22, 2018, 11:16 AM IST
ಹೊಸದಿಲ್ಲಿ : ಹಿರಿಯ ಕಾಂಗ್ರೆಸ್ ನಾಯಕ , ಮಾಜಿ ಕೇಂದ್ರ ಸಚಿವ ಗುರುದಾಸ್ ಕಾಮತ್ ಅವರು ಬುಧವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.
ಹೃದಯಾಘಾತಕ್ಕೀಡಾಗಿದ್ದ ಕಾಮತ್ ಅವರನ್ನು ಚಾಣಕ್ಯಪುರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಗುರುದಾಸ್ ಕಾಮತ್ ಅವರ ನಿಧನ ವಾರ್ತೆ ಕೇಳುತ್ತಿದ್ದಂತೆ ಆಸ್ಪತ್ರೆಗೆ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೌಡಾಯಿಸಿ ಅಂತಿಮ ನಮನ ಸಲ್ಲಿಸಿದ್ದಾರೆ. ಕಾಮತ್ ಅವರ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದಿದ್ದಾರೆ.
ಮುಂಬಯಿ ಕುರ್ಲಾ ಮೂಲದ ಕಾಮತ್ ಅವರು ಸಾಮಾನ್ಯ ಕುಟುಂಬದಿಂದ ಬಂದವರು. ಎನ್ಎಸ್ಐಯು ಮೂಲಕ ಹೋರಾಟ ಆರಂಭಿಸಿದ್ದ ಅವರು ಯುವ ಕಾಂಗ್ರೆಸ್ ನಾಯಕರಾಗಿ ಹೊರ ಹೊಮ್ಮಿ 5 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ಯುಪಿಎ ಸರ್ಕಾರದಲ್ಲಿ ಟೆಲಿಕಾಂ ರಾಜ್ಯ ಖಾತೆ ಸಚಿವರಾಗಿ ಕೆಲಸ ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್