ಕೇಜ್ರಿಗೆ ಭಾರೀ ಹಿನ್ನಡೆ, 20 ಆಪ್ ಶಾಸಕರನ್ನು ಅನರ್ಹಗೊಳಿಸಿ; ಆಯೋಗ

Team Udayavani, Jan 19, 2018, 2:41 PM IST

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆ ಎಂಬಂತೆ ಆಪ್ ನ 20 ಶಾಸಕರನ್ನು ಅನರ್ಹಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿಗೆ ಶಿಫಾರಸು ಮಾಡಿದೆ.

ಲಾಭದಾಯಕ ಹುದ್ದೆ ಹೊಂದಿರುವ ಆರೋಪದಡಿಯಲ್ಲಿ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿ ರಾಮನಾಥ್ ಗೋವಿಂದ್ ಅವರಿಗೆ ಚುನಾವಣಾ ಆಯೋಗ ವರದಿ ಕಳುಹಿಸಿರುವುದಾಗಿ ತಿಳಿಸಿದೆ.

ಆಮ್ ಆದ್ಮಿ ಪಕ್ಷದ 21 ಶಾಸಕರನ್ನು ಅನರ್ಹಗೊಳಿಸುವಂತೆ 2016ರ ಜೂನ್ 9ರಂದು ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷ ಬಹುಮತ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದು, 20 ಸ್ಥಾನಗಳಿಗೆ ಉಪಚುನಾವಣೆಯ ನಡೆಯುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ