ಸುಪ್ರೀಂನಲ್ಲೂ ಉದ್ಧವ್ ಗೆ ಮುಖಭಂಗ : ನಾಳೆಯೇ ಬಹುಮತ ಸಾಬೀತಿಗೆ ಸುಪ್ರೀಂ ಮಹತ್ವದ ಆದೇಶ
Team Udayavani, Jun 29, 2022, 9:27 PM IST
ನವದೆಹಲಿ : ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಇನ್ನೂ ಅಂತ್ಯಗೊಂಡಿಲ್ಲ. ರಾಜಕೀಯ ಸುಳಿಯಿಂದ ಪಾರಾಗಲು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಸಿಎಂ ಉದ್ಧವ್ ಠಾಕ್ರೆ ಸರ್ಕಾರಕ್ಕೆ ಮತ್ತೆ ಮುಖಭಂಗವಾಗಿದೆ. ರಾಜ್ಯಪಾಲರು ನೀಡಿದ್ದ ವಿಶ್ವಾಸಮತ ಯಾಚನೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಠಾಕ್ರೆಗೆ ಮತ್ತೊಮ್ಮೆ ಆಘಾತ ಎದುರಾಗಿದೆ. ಬುಧವಾರ ರಾತ್ರಿ ನಡೆದ ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಅದರಂತೆ ಜೂನ್ ೩೦ ರಂದು ವಿಶ್ವಾಸಮತ ಯಾಚನೆ ನಡೆಸಲು ಸುಪ್ರೀಂ ಕೋರ್ಟ್ ಸೂಚಿಸಿದೆ. ಹೀಗಾಗಿ ನಾಳೆ ಉದ್ಧವ್ ಠಾಕ್ರೆ ಸರ್ಕಾರ ವಿಶ್ವಾಸಮತ ಯಾಚನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈಗಾಗಲೇ ಬಹುಮತ ಕಳೆದುಕೊಂಡಿರುವ ಉದ್ಧವ್ ಠಾಕ್ರೆ ಸರ್ಕಾರ ವಿಶ್ವಾಸಮತ ಯಾಚನೆ ಮಾಡಿದರೆ ಸರ್ಕಾರ ಪತನಗೊಳ್ಳುವುದು ಬಹುತೇಕ ಖಚಿತವಾಗಿದೆ.