ಲಕ್ನೋ: ನಾಮಪತ್ರ ಸಲ್ಲಿಸಿದ ಸಮಾಜವಾದಿ ಪಕ್ಷದ ಅಭ್ಯರ್ಥಿ ಪೂನಂ ಸಿನ್ನಾ

Team Udayavani, Apr 18, 2019, 1:47 PM IST

ಲಕ್ನೋ: ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಗೊಂಡಿದ್ದ ನಟ ಶತ್ರುಘ್ನ ಸಿನ್ನಾ ಪತ್ನಿ ಪೂನಮ್ ಸಿನ್ನಾ ಬುಧವಾರ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಲಕ್ನೋ ಲೋಕಸಭಾ ಕ್ಷೇತ್ರಕ್ಕೆ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

ಲಕ್ನೋ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ರಾಜ್ ನಾಥ್ ಸಿಂಗ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದು, ಸಮಾಜವಾದಿ ಪಕ್ಷ, ಬಹುಜನ್ ಸಮಾಜ್ ಪಕ್ಷ ಹಾಗೂ ರಾಷ್ಟ್ರೀಯ ಲೋಕದಳ ಮಹಾಮೈತ್ರಿಕೂಟದ ಅಭ್ಯರ್ಥಿಯಾಗಿ ಪೂನಂ ಸಿನ್ನಾ ಅಖಾಡಕ್ಕಿಳಿದಿರುವುದಾಗಿ ವರದಿ ತಿಳಿಸಿದೆ.

ಭಾರತೀಯ ಜನತಾ ಪಕ್ಷದ ಭದ್ರಕೋಟೆಯಾಗಿರುವ ಲಕ್ನೋದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಪೂನಂ ಸಿನ್ನಾಗೆ ಇದು ಅವರ ಮೊದಲ ಚುನಾವಣೆಯಾಗಿದೆ. ಒಂದು ವೇಳೆ ಕಾಂಗ್ರೆಸ್ ಪಕ್ಷ ಪೂನಂ ಅವರನ್ನು ಬೆಂಬಲಿಸಿದರೆ ಲಕ್ನೋ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ ಇಲ್ಲ ಎಂದು ವರದಿ ಹೇಳಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ