ನಿಗಮ್‌ ಬೋಧ್‌ ಘಾಟ್‌ ನಲ್ಲಿ ಶೀಲಾ ದೀಕ್ಷಿತ್ ಅಂತ್ಯಕ್ರಿಯೆ

Team Udayavani, Jul 21, 2019, 12:20 PM IST

ಹೊಸದಿಲ್ಲಿ: ಶನಿವಾರ ಸಂಜೆ ನಿಧನರಾಗಿದ್ದ ಕಾಂಗ್ರೆಸ್‌ ಹಿರಿಯ ನಾಯಕಿ, ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2.30ಕ್ಕೆ ದೆಹಲಿಯ ನಿಗಮ್‌ ಬೋಧ್‌ ಘಾಟ್‌ ನಲ್ಲಿ ನಡೆಯಲಿದೆ.

ದೆಹಲಿಯ ಪೂರ್ವ ನಿಜಾಮುದ್ದೀನ್‌ ನಲ್ಲಿರುವ ಶೀಲಾ ದೀಕ್ಷಿತ್‌ ಅವರ ನಿವಾಸದಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಮುಂದೆ ಪಾರ್ಥೀವ ಶರೀರವನ್ನು ಕಾಂಗ್ರೆಸ್‌ ಕಚೇರಿಗೆ ಕೊಂಡೊಯ್ಯಲಾಗುವುದು. ಅಲ್ಲಿ ಪಕ್ಷದ ಮುಖಂಡರು ಅಗಲಿದ ನಾಯಕಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.

ದೆಹಲಿ ಕಾಂಗ್ರೆಸ್‌ ನ ಪ್ರಮುಖ ಮುಖಂಡೆಯಾಗಿದ್ದ ಶೀಲಾ ದೀಕ್ಷಿತ್‌ ಅವರು 1998ರಿಂದ 2013ರ ವರೆಗೆ ದೆಹಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಮಾಜಿ ಸಚಿವೆ ಸುಷ್ಮಾ ಸ್ವರಾಜ್‌, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ಧುಲ್ಲಾ ಸೇರಿದಂತೆ ಹಲವು ಗಣ್ಯರು ಶೀಲಾ ದೀಕ್ಷಿತ್‌ ಅವರ ನಿವಾಸದಲ್ಲಿ ಅಗಲಿದ ಚೇತನಕ್ಕೆ ಅಂತಿಮ ಗೌರವ ಸಲ್ಲಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ