ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಶಿಯಾ ವಕ್ಫ್ ಬೋರ್ಡ್ ನಿಂದ 51 ಸಾವಿರ ರೂ. ದೇಣಿಗೆ

Team Udayavani, Nov 15, 2019, 11:56 AM IST

ಲಕ್ನೋ:ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಉತ್ತರಪ್ರದೇಶದ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್ ಅಧ್ಯಕ್ಷ ವಾಸಿಂ ರಿಝ್ಮಿ 51 ಸಾವಿರ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಶಿಯಾ ವಕ್ಫ್ ಬೋರ್ಡ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯದ ಪರವಾಗಿದೆ ಎಂದು ಹೇಳಿರುವ ವಾಸಿಂ, ಸುಪ್ರೀಂಕೋರ್ಟ್ ತೀರ್ಪು ಸಾಧ್ಯವಾದ ರೀತಿಯ ಅತ್ಯುತ್ತಮ ತೀರ್ಪು ಇದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಉತ್ತರಪ್ರದೇಶದ ಅಯೋಧ್ಯೆಯ ವಿವಾದ ಸ್ಥಳದಲ್ಲಿಯೇ ರಾಮಮಂದಿರ ನಿರ್ಮಾಣದ ಬಗ್ಗೆ ಸುಪ್ರೀಂಕೋರ್ಟ್ ನ ಪಂಚಸದಸ್ಯ ಸಾಂವಿಧಾನಿಕ ಪೀಠ ಸರ್ವಾನುಮತದ ತೀರ್ಪನ್ನು ಪ್ರಕಟಿಸಿತ್ತು. ಅಲ್ಲದೇ ಕೇಂದ್ರ ಸರ್ಕಾರ ಮಸೀದಿ ನಿರ್ಮಾಣಕ್ಕಾಗಿ ಪ್ರತ್ಯೇಕವಾಗಿ 5 ಎಕರೆ ಭೂಮಿಯನ್ನು ಸುನ್ನಿ ವಕ್ಫ್ ಬೋರ್ಡ್ ಗೆ ನೀಡಬೇಕು ಎಂದು ನಿರ್ದೇಶನ ನೀಡಿತ್ತು.

ಅಯೋಧ್ಯೆಯಲ್ಲಿ ಬೃಹತ್ ರಾಮಮಂದಿರ ನಿರ್ಮಾಣ ಕಾರ್ಯಕ್ಕಾಗಿ ತಯಾರಿ ನಡೆಯುತ್ತಿದೆ. ರಾಮ ಎಲ್ಲರಿಗೂ ಮೂಲಪುರುಷನಾಗಿದ್ದಾನೆ. ನಾವು ರಾಮಮಂದಿರ ನಿರ್ಮಾಣಕ್ಕಾಗಿ ವಾಸಿಂ ರಿಝ್ವಿ ಫಿಲ್ಮ್ ಹೆಸರಿನಲ್ಲಿ 51 ಸಾವಿರ ರೂಪಾಯಿ ದೇಣಿಗೆಯನ್ನು ರಾಮ ಜನ್ಮಭೂಮಿ ನ್ಯಾಸ್ ಗೆ ನೀಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ