ಟಿಪ್ಪು ಸುಲ್ತಾನ್ ಉದ್ಯಾನದ ಹೆಸರು ಬದಲಾವಣೆಗೆ ಮಹಾರಾಷ್ಟ್ರ ಸರ್ಕಾರ ನಿರ್ಧಾರ
Team Udayavani, Jan 27, 2023, 8:28 PM IST
ಮುಂಬೈ: ಮಹಾರಾಷ್ಟ್ರದ ಮುಂಬೈನ ಮಲಾಡ್ ಪ್ರದೇಶದ ಉದ್ಯಾನವೊಂದಕ್ಕೆ ಹಿಂದಿನ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಇಟ್ಟಿದ್ದ “ಟಿಪ್ಪು ಸುಲ್ತಾನ್ ಉದ್ಯಾನ’ ಹೆಸರನ್ನು ಬದಲಿಸಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.
ಈ ಹಿಂದೆ ಉದ್ಯಾನಕ್ಕೆ ಟಿಪ್ಪು ಸುಲ್ತಾನ್ ಹೆಸರು ವಿರೋಧಿಸಿ ಸಕಲ ಹಿಂದೂ ಸಮಾಜ ವತಿಯಿಂದ ಬೃಹತ್ ಪ್ರತಿಭಟನೆ ನಡೆದಿತ್ತು. ಟಿಪ್ಪು ಸುಲ್ತಾನ್ ಉದ್ಯಾನದ ಹೆಸರು ಬದಲಿಸಿ ಮರುನಾಮಕರಣಗೊಳಿಸುವಂತೆ ಸೂಚಿಸಿ ಜಿಲ್ಲಾಧಿಕಾರಿಗಳಿಗೆ ಸಚಿವ ಮಂಗಲ್ ಪ್ರಭಾತ್ ಲೋಧಾ ಆದೇಶಿಸಿದ್ದಾರೆ.
“ಅಂತಿಮವಾಗಿ ಸತ್ಯಕ್ಕೆ ಗೆಲುವು. ಸಕಲ ಹಿಂದೂ ಸಮಾಜದ ಪ್ರತಿಭಟನೆ ಮತ್ತು ಗೋಪಾಲ್ ಶೆಟ್ಟಿ ಅವರ ಒತ್ತಾಯ ಪರಿಗಣಿಸಿ ಮಲಾಡ್ ಉದ್ಯಾನದ ಹೆಸರನ್ನು ಮರುನಾಮಕರಣಕ್ಕೆ ನಿರ್ಧರಿಸಲಾಗಿದೆ. ಈ ಕುರಿತು ಆದೇಶ ಹೊರಡಿಸಲಾಗಿದೆ,’ ಎಂದು ಲೋಧಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ
64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ
ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ
ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮಹತ್ವದ ಒಪ್ಪಂದ
ಝಾಕಿರ್ ನಾಯ್ಕನ ವಿಚಾರ ಒಮಾನ್ ನೊಂದಿಗೆ ಹಂಚಿಕೊಂಡಿದ್ದೇವೆ :ಅರಿಂದಮ್ ಬಾಗ್ಚಿ
MUST WATCH
ಹೊಸ ಸೇರ್ಪಡೆ
ಕ್ಷೇತ್ರ ಇಲ್ಲದಿದ್ದರೆ 25 ಕ್ಷೇತ್ರಗಳಿಂದ ಆಫರ್ ಬರುತ್ತಿತ್ತಾ?: ಸಿದ್ದರಾಮಯ್ಯ
ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ
ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ
ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ
ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಬಾಲಕ ಮೃತ್ಯು