ಗುಂಡಿನ ಕಾಳಗ; ಯೋಧರಿಬ್ಬರು ಹುತಾತ್ಮ; 3 ಉಗ್ರರು ಫಿನಿಶ್
Team Udayavani, Aug 13, 2017, 10:12 AM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನ ಅವ್ನೀರಾ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಮೂವರು ಹಿಜ್ಬುಲ್ ಮುಜಾಯಿದ್ದೀನ್ ಉಗ್ರರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ.
ದಟ್ಟಾರಣ್ಯದಲ್ಲಿ ಉಗ್ರರ ಇರುವಿಕೆಯ ಖಚಿತ ಮಾಹಿತಿಯ ಮೇಲೆ ಜಂಟಿ ದಾಳಿ ನಡೆಸಿದ ಯೋಧರು ಮತ್ತು ಪೊಲೀಸರು ಭಾರೀ ಗುಂಡಿನ ಚಕಮಕಿ ನಡೆಸಿದ್ದಾರೆ . ಈ ವೇಳೆ ಇಬ್ಬರು ಯೋಧರು ಹುತಾತ್ಮರಾದರೆ ಮೂವರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಓರ್ವನನ್ನು ಮೊದಲು ಹತ್ಯೆಗೈಯಲು ಯಶಸ್ವಿಯಾದರೆ ಅಡಗಿದ್ದ ಇನ್ನಿಬ್ಬರು ಉಗ್ರರಿಗಾಗಿ ಭಾರೀ ಕಾರ್ಯಾಚರಣೆ ನಡೆಸಬೇಕಾಯಿತು ಎಂದು ಸೇನಾ ಮೂಲಗಳು ತಿಳಿಸಿವೆ.
ಉಗ್ರರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಗಾಯಾಳು ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರೈ ಶೋಪಿಯಾನ್ ಸೇನಾ ಶಿಬಿರವೊಂದರ ಮೇಲೆ ಉಗ್ರರು ನಡೆಸಿದ್ದ ದಾಳಿ ಯಲ್ಲಿ ಗಾಯಗೊಂಡ ಯೋಧ ರೊಬ್ಬರು ತಡರಾತ್ರಿ ಹುತಾತ್ಮರಾಗಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ