ಮಹಾರಾಷ್ಟ್ರದಲ್ಲಿ ಸಮ – ಬೆಸ ರೀತಿ ಅಂಗಡಿ ಓಪನ್‌


Team Udayavani, Jun 1, 2020, 7:49 AM IST

ಮಹಾರಾಷ್ಟ್ರದಲ್ಲಿ ಸಮ – ಬೆಸ ರೀತಿ ಅಂಗಡಿ ಓಪನ್‌

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೇಂದ್ರ ಸರಕಾರವು ಜೂ. 1ರಿಂದ ಅನ್‌ಲಾಕ್‌ ಮೊದಲ ಹಂತದ ನಿಯಮಗಳನ್ನು ಘೋಷಿಸಿದ ಅನಂತರವೂ, ಮಹಾರಾಷ್ಟ್ರ, ಗುಜರಾತ್‌, ತಮಿಳುನಾಡು, ಉತ್ತರ ಪ್ರದೇಶ, ತೆಲಂಗಾಣ ಸರಕಾರಗಳು ಲಾಕ್‌ಡೌನ್‌ ಅನ್ನು ಜೂ. 30ರವರೆಗೆ ಮುಂದುವರಿಸಿರುವುದಾಗಿ ಪ್ರಕಟಿಸಿವೆ.

ಮೇಘಾಲಯ ಜೂ.6ರವರೆಗೆ ಲಾಕ್‌ಡೌನ್‌ ಮುಂದುವರಿಸಿದೆ. ಕೇಂದ್ರದ ಘೋಷಣೆ ಹೊರ ಬೀಳುವ ಮೊದಲೇ ಶನಿವಾರದಂದು, ಮಧ್ಯಪ್ರದೇಶ ಸರಕಾರ ತನ್ನ ವ್ಯಾಪ್ತಿಯಲ್ಲಿನ ಲಾಕ್‌ಡೌನ್‌ ಅನ್ನು ಜೂ. 30ರವರೆಗೆ ಮುಂದುವರಿಸುವುದಾಗಿ ಆದೇಶ ಹೊರಡಿಸಿತ್ತು.

ಮಹಾರಾಷ್ಟ್ರ ಸರಕಾರ ತನ್ನ ನಿರ್ಧಾರಕ್ಕೆ ‘ಮಿಷನ್‌ ಬಿಗಿನ್‌ ಎಗೇನ್‌’ ಎಂದು ಹೆಸರಿಟ್ಟಿದೆ. ರವಿವಾರ ಹೊರಬಿದ್ದಿರುವ ಸರಕಾರದ ಹೊಸ ಆದೇಶದಲ್ಲಿ ಕೆಂಪು ವಲಯಗಳಲ್ಲಿ ಮೂರು ಹಂತಗಳಲ್ಲಿ ನಿರ್ಬಂಧಗಳನ್ನು ಸಡಿಲಿಸುವ ಬಗ್ಗೆ ವಿವರಣೆ ನೀಡಲಾಗಿದೆ. ಮೊದಲಿಗೆ ಜೂ. 3ರಿಂದ ಮೊದಲ ಹಂತದ ಸಡಿಲಿಕೆ ಆರಂಭವಾಗುತ್ತದೆೆ.
ಅಂದಿನಿಂದ, ಕ್ರೀಡಾ ಸಮುಚ್ಛಯಗಳನ್ನು ಆರಂಭಿಸಲು ಅನುಮತಿ ನೀಡಲಾಗಿದ್ದು, ಜೂ. 5ರಿಂದ ಮಾರುಕಟ್ಟೆ – ಅಂಗಡಿಗಳಿಗೆ ಹಾಗೂ ಜೂ. 8ರಿಂದ ಖಾಸಗಿ ಕಂಪನಿಗಳಿಗೆ ಸೇವೆ ಆರಂಭಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಇಲ್ಲೂ ಕೆಲವು ನಿಯಮಗಳನ್ನು ವಿಧಿಸಲಾಗಿದೆ. ಸ್ಥಳೀಯ ರೈಲುಗಳಿಗೆ ಅವಕಾಶ ನೀಡಲಾಗಿಲ್ಲ.

ಜೂ. 5ರಿಂದ ಮಹಾರಾಷ್ಟ್ರದಲ್ಲಿ ಮಾಲ್‌ಗಳನ್ನು ಹೊರತುಪಡಿಸಿದಂತೆ, ಮಾರುಕಟ್ಟೆಗಳು, ಅಂಗಡಿಗಳನ್ನು ಪ್ರತಿ ದಿನ ಸಮ-ಬೆಸ ಆಧಾರದಲ್ಲಿ ತೆರೆಯುವಂತೆ ಆದೇಶಿಸಲಾಗಿದೆ. ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವ್ಯಾಪಾರ -ವಹಿವಾಟಿಗೆ ಅವಕಾಶವಿರುತ್ತದೆ. ಇನ್ನು, ಜೂ. 8ರಿಂದ ಮಹಾರಾಷ್ಟ್ರದ ಎಲ್ಲಾ ಖಾಸಗಿ ಕಚೇರಿಗಳು ತಮಗೆ ಅಗತ್ಯವಿರುವ ಶೇ. 10ರಷ್ಟು ಉದ್ಯೋಗಿಗಳನ್ನು ಇಟ್ಟುಕೊಂಡು ಕಚೇರಿಗಳನ್ನು ಪುನರಾರಂಭಿಸಬಹುದು.

ಸರಕಾರಿ ಕಚೇರಿಗಳು ಈಗಿರುವ ಶೇ. 5ರ ಬದಲಿಗೆ ಶೇ. 15ರಷ್ಟು ಸಿಬಂದಿಯನ್ನಿಟ್ಟುಕೊಂಡು ಸೇವೆ ನಿರ್ವಹಿಸಬಹುದು. ಉಳಿದವರಿಗೆ ಸಂಬಂಧಪಟ್ಟ ಸಂಸ್ಥೆಗಳು ‘ವರ್ಕ್‌ ಫ್ರಂ ಹೋಮ್‌’ ಸೌಲಭ್ಯ ಕಲ್ಪಿಸಬೇಕು ಎಂದು ಸರಕಾರಿ ಆದೇಶದಲ್ಲಿ ಹೇಳಲಾಗಿದೆ. ಇನ್ನು, ಜಿಲ್ಲೆಯೊಳಗಿನ ಸಾರಿಗೆ ವ್ಯವಸ್ಥೆಗೆ ಅನುಮತಿ ಕಲ್ಪಿಸಲಾಗಿದ್ದು, ಅಂತರ ಜಿಲ್ಲಾ ಸಂಚಾರಕ್ಕೆ ಹಾಕಿರುವ ತಡೆಯನ್ನು ಮುಂದುವರಿಸಲಾಗಿದೆ.

ಉತ್ತರ ಪ್ರದೇಶ
ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾದ ಉತ್ತರ ಪ್ರದೇಶದಲ್ಲಿ, ಜೂ. 8ರಿಂದ ಪ್ರಾರ್ಥನಾ ಸ್ಥಳಗಳು, ಹೊಟೇಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಶಾಪಿಂಗ್‌ ಮಾಲ್‌ಗಳನ್ನು ಸಾರ್ವಜನಿಕರಿಗೆ ಮುಕ್ತವಾಗಿಸಲಾಗುತ್ತದೆ. ಜೂ. 1ರಿಂದಲೇ ರಾಜ್ಯಾದ್ಯಂತ ಬಸ್‌ ಸಂಚಾರ ಆರಂಭಿಸಲಾಗುತ್ತದೆ.

ತೆಲಂಗಾಣ
ಕಂಟೈನ್‌ಮೆಂಟ್‌ ವಲಯಗಳಲ್ಲಿ ಜೂ. 30ರವರೆಗೆ ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿಗೊಳಿಸುವ ಕೇಂದ್ರದ ನಿರ್ಧಾರಕ್ಕೆ ತಾವು ಬದ್ಧರಿರುವುದಾಗಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ತಿಳಿಸಿದ್ದಾರೆ. ಜೂ. 7ರ ನಂತರ ಕಂಟೈನ್‌ಮೆಂಟ್‌ ಹೊರತಾದ ವಲಯಗಳಲ್ಲಿ ಈಗ ಜಾರಿಯಲ್ಲಿರುವ ನಿಬಂಧನೆಗಳನ್ನು ಮತ್ತಷ್ಟು ಸಡಿಲಗೊಳಿಸಲಾಗುತ್ತದೆ. ರಾಜ್ಯಾದ್ಯಂತ ಅಂಗಡಿಗಳನ್ನು ರಾತ್ರಿ 8ಕ್ಕೆ ಮುಚ್ಚಬೇಕು ಎಂದು ಸೂಚಿಸಲಾಗಿದ್ದು, ಅಂತರ ರಾಜ್ಯ ರಸ್ತೆ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಅವರು ಹೇಳಿದ್ದಾರೆ.

ತಮಿಳುನಾಡು
ಲಾಕ್‌ಡೌನ್‌ ಅನ್ನು ಜೂ. 30ರವರೆಗೆ ಮುಂದುವರಿಸಲಾಗಿದ್ದರೂ, ಸಾರಿಗೆ ಸಂಚಾರ, ಕಚೇರಿಗಳ ಪುನರಾರಂಭ ಸೇರಿದಂತೆ ಕೆಲವು ವಲಯಗಳಿಗೆ ವಿಧಿಸಲಾಗಿರುವ ನಿಬಂಧನೆಗಳಲ್ಲಿ ಹೆಚ್ಚಿನ ಸಡಿಲಿಕೆ ಮಾಡುವುದಾಗಿ ಸರಕಾರ ತಿಳಿಸಿದೆ. ಪ್ರಾರ್ಥನಾ ಸ್ಥಳಗಳು, ಧಾರ್ಮಿಕ ಸಮಾವೇಶಗಳು, ಅಂತರ ರಾಜ್ಯ ಬಸ್‌ ಸೇವೆಗಳು, ಮೆಟ್ರೋ ಹಾಗೂ ರೈಲು ಸೇವೆಗಳ ಮೇಲಿನ ನಿರ್ಬಂಧ ಮುಂದುವರಿಯಲಿವೆ. ನೀಲಗಿರಿ ಬೆಟ್ಟಗಳು, ಕೊಡೈಕೆನಾಲ್‌ ಹಾಗೂ ಯೆರ್ಚೂಡ್‌ ನಗರಗಳಿಗೆ ಪ್ರವಾಸಿಗರ ನಿರ್ಬಂಧ ಮುಂದುವರಿಯಲಿದೆ. ಹೋಟೆಲ್‌ಗ‌ಳು, ರೆಸಾರ್ಟ್‌ಗಳು ಬಂದ್‌ ಆಗಿರಲಿವೆ.

ಗುಜರಾತ್‌
ಗುಜರಾತ್‌ನಲ್ಲಿ ರಾಜ್ಯ ಸಾರಿಗೆಯನ್ನು ರಾಜ್ಯವ್ಯಾಪಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಅಲ್ಲಿಯೂ ಸಮ-ಬೆಸ ಆಧಾರದಲ್ಲಿ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಎಲ್ಲರಿಗೂ ಫೇಸ್‌ ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯಗೊಳಿಸಲಾಗುತ್ತದೆ.

ಮೇಘಾಲಯ
ಇಲ್ಲಿ ಲಾಕ್‌ಡೌನ್‌ನ ಈಗಿನ ನಿಯಮಗಳನ್ನು ಜೂ. 6ರವರೆಗೆ ಮುಂದೂಡಿದ್ದರೂ, ಈವರೆಗೆ ನೀಡಲಾಗಿರುವ ಸಡಿಲಿಕೆಗಳಿಗಿಂತ ಹೆಚ್ಚಿನ ಸಡಿಲಿಕೆಗಳನ್ನು ನೀಡಲಾಗಿದೆ. ಅತಿ ಹೆಚ್ಚು ಅಂಗಡಿಗಳು, ಶೋರೂಂಗಳು ಇರುವ ಈಸ್ಟ್‌ ಖಾಸಿ ಹಿಲ್ಸ್‌ ಜಿಲ್ಲೆಯಲ್ಲಿ ಜೂ. 3ರಿಂದ 6ರವರೆಗೆ ವ್ಯಾಪಾರ – ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ. ಇದೇ ಜಿಲ್ಲೆಯಲ್ಲಿ ರಾಜ್ಯದ ರಾಜಧಾನಿ ಶಿಲ್ಲಾಂಗ್‌ ಕೂಡ ಇದೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.