ಆಪ್ ನೂತನ ಶಾಸಕ ನರೇಶ್ ಯಾದವ್ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: ಓರ್ವ ಸಾವು
Team Udayavani, Feb 12, 2020, 8:01 AM IST
ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಸಂಭ್ರಮಾಚರಣೆ ಮಾಡುತ್ತಿರುವ ಸಂದರ್ಭದಲ್ಲೇ ಆಮ್ ಆದ್ಮಿ ಪಕ್ಷದ ಚುನಾಯಿತ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಮಹರೌಲಿ ಶಾಸಕ ನರೇಶ್ ಯಾದವ್ ಮತ್ತು ಬೆಂಬಲಿಗರು ತಮ್ಮ ಚುನಾವಣಾ ಕ್ಷೇತ್ರದಲ್ಲಿರುವ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಹಿಂದಿರುಗುತ್ತಿದ್ದರು. ನೈರುತ್ಯ ದೆಹಲಿಯ ಕೃಷ್ಣಾಗಡ್ ಗ್ರಾಮದಲ್ಲಿ ಇವರು ಸಂಚರಿಸುತ್ತಿದ್ದ ವಾಹನದ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ ಓರ್ವ ಸಾವಿಗೀಡಾಗಿದ್ದು , ಮತ್ತೊಬ್ಬರಿಗೆ ಗಾಯಗಳಾಗಿವೆ. ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ನರೇಶ್ ಯಾದವ್ ಈ ಘಟನೆ ನಿಜಕ್ಕೂ ದುರದೃಷ್ಟಕರ . ದಾಳಿಯ ಹಿಂದಿನ ಕಾರಣ ನನಗೆ ತಿಳಿದಿಲ್ಲ. ಆದರೆ ಇದ್ದಕ್ಕಿದ್ದಂತೆ ನಾಲ್ಕು ಸುತ್ತು ಗುಂಡು ಹಾರಿಸಲಾಯಿತು ಎಂದು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ