ಕೃತಕ ಬಿರುಕು ಸೃಷ್ಟಿಸಲು ಸಿದ್ದರಾಮಯ್ಯ ಯತ್ನ
Team Udayavani, Mar 29, 2018, 2:34 PM IST
ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಮತ್ತು ದಕ್ಷಿಣ ಭಾರತದ ನಡುವೆ ಕೃತಕ ಬಿರುಕು ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಆರೋಪಿಸಿದ್ದಾರೆ. ರಾಜ್ಯಗಳ ನಡುವೆ ತೆರಿಗೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಗತ್ಯಕ್ಕಿಂತ ಹೆಚ್ಚು ವಿವಾದ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
“ನ್ಯೂಸ್ 18′ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಮಾತ್ರವಲ್ಲ, ಉತ್ತರ ಭಾರತದಲ್ಲಿಯೂ ಅಭಿವೃದ್ಧಿ ಸಾಧಿಸಿದರಾಜ್ಯಗಳಿವೆ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
2011ನೇ ಜನಗಣತಿಯನ್ನು ಮುಂದಿಟ್ಟುಕೊಂಡು ರಾಜ್ಯಗಳಿಗೆ ಕೇಂದ್ರದ ಅನುದಾನ ನೀಡಿಕೆ ಎಂಬ 15ನೇ ಹಣಕಾಸು ಆಯೋಗದ ಸಲಹೆಯನ್ನು ಆಕ್ಷೇಪಿಸಿ ಕೇಂದ್ರಕ್ಕೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಅದರಲ್ಲಿ ಕುಟುಂಬ ಯೋಜನೆ ಮತ್ತು ಇತರ ಕೇಂದ್ರ ಯೋಜನೆಗಳ ಅನುಷ್ಠಾನದಲ್ಲಿ ದಕ್ಷಿಣದ ರಾಜ್ಯಗಳೇ ಮುಂದು ಎಂದು ಪ್ರಸ್ತಾಪಿಸಿದ್ದಕ್ಕೆ ರಾಮ್‌ಮಾಧವ್ ಈ ತಿರುಗೇಟು ನೀಡಿದ್ದಾರೆ.
15ನೇ ಹಣಕಾಸು ಆಯೋಗದ ಶಿಫಾರಸುಗಳು ಕೆಲವು ರಾಜ್ಯಗಳಿಗೆ ಅನಾನುಕೂಲವಾಗಲಿದೆ ಎಂಬ ಅಂಶವನ್ನು ಒಪ್ಪಿಕೊಂಡ ರಾಮ್ ಮಾಧವ್, ಆಯೋಗ ಈ ವರ್ಷವಷ್ಟೇ ಕೆಲಸ ಮಾಡಲು ಆರಂಭಿಸಿದೆ. ಮುಂದಿನ ಸರ್ಕಾರಕ್ಕೆ 2019ರಲ್ಲಿ ಅದು ವರದಿ ಸಲ್ಲಿಸಲಿದೆ. ಹೀಗಾಗಿ ಈ ನಿಟ್ಟಿನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲದ ರಾಜಕಾರಣ ಮಾಡುತ್ತಾರೆ ಎಂದು ದೂರಿದ್ದಾರೆ ಬಿಜೆಪಿ ಪ್ರಧಾನ ಕಾರ್ಯದರ್ಶಿ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಸಿದ್ದರಾಮಯ್ಯಗೆ ಬೆಂಬಲ ನೀಡಿದ್ದಾರಲ್ಲ ಎಂಬ ಪ್ರಶ್ನೆ “ಒಂದೇ ಗರಿಯ ಹಕ್ಕಿಗಳು ಅದನ್ನೇ ಮಾಡುತ್ತವೆ. ಈ ಪಕ್ಷಗಳು ರಾಜ್ಯಗಳು ಮತ್ತು ರಾಜ್ಯಗಳ ನಡುವೆ ವೈಷಮ್ಯ ತರುತ್ತವೆ’ ಎಂದರು.
ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರದಲ್ಲಿ ಬಿಜೆಪಿ ಸಿಕ್ಕಿ ಹಾಕಿಕೊಂಡಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಮ್ ಮಾಧವ್, ಬಿಜೆಪಿ ಅಧ್ಯಕ್ಷ ಅಮಿತ್ ಶಾರ ಪ್ರವಾಸ ರಾಜಕೀಯ ಉದ್ದೇಶದ್ದಾಗಿರಲಿಲ್ಲ. ಭೇಟಿಯನ್ನು ರಾಜಕೀಯ ಬಳಸುವುದು ಬಿಡುವುದು ಆಯಾ ಪಕ್ಷಗಳಿಗೆ ಬಿಟ್ಟ ವಿಚಾರ ಎಂದರು. ನಿಗದಿತ ಸಮುದಾಯಕ್ಕೆ ಯಾವ ಬೇಡಿಕೆಯನ್ನು ಈಡೇರಿಸಲಾಗಿದೆಯೋ ಅದನ್ನು ರಾಜಕೀಯ ದಾಳವಾಗಿ ಬಳಕೆ ಮಾಡುವ ಬಗ್ಗೆ ಆಯಾ ಪಕ್ಷಗಳೇ ಯೋಚಿಸಬೇಕು ಎಂದಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಹಿಂದೂ ವಿರೋಧಿ ಎಂದು ಬಿಜೆಪಿ ಚಿತ್ರಿಸುತ್ತಿದೆ. ಅದು ಮೇ 15ರಂದು ಫಲ ನೀಡಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ನಾಯಕ, ಕಾಂಗ್ರೆಸ್ ತನ್ನನ್ನು ಆ ರೀತಿ ಬಿಂಬಿಸುತ್ತಿದೆ. ಆದರೆ ಬಿಜೆಪಿ ಆ ರೀತಿ ಹೇಳಿಯೇ ಇಲ್ಲವೆಂದಿದ್ದಾರೆ. ವಿವಿಧ ದೇಗುಲಗಳಿಗೆ ಭೇಟಿ ನೀಡುವ ಮೂಲಕ ತಾವು ಹಿಂದೂ ವಿರೋಧಿಯಲ್ಲವೆಂಬ ಭಾವನೆ ಸೃಷ್ಟಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಂ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ರಾಮ್ ಮಾಧವ್, ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಆಡಳಿತವನ್ನು ರಾಜ್ಯದ ಜನರು ನೋಡಿದ್ದಾರೆ. ಜನರು ಈಗ ಅವರು ಮಾಡುವ ಟೀಕೆಗೆ ನಗುತ್ತಿದ್ದಾರೆ. ಕಾಂಗ್ರೆಸಿಗರು ಜೆಡಿಎಸ್ ಅನ್ನು ಬಳಸಿಕೊಂಡದ್ದಕ್ಕೆ ಬಿಜೆಪಿಯನ್ನು ಹೊಣೆ ಮಾಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಜ್ ಮಹಲ್ ಅಡಿಯಲ್ಲಿ ಪ್ರಧಾನಿಯ ಡಿಗ್ರಿ ಹುಡುಕುತ್ತಿದ್ದಾರೆ: ಓವೈಸಿ ವ್ಯಂಗ್ಯ
ಕೇದಾರನಾಥದ ಕಸದ ರಾಶಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ವಿಜ್ಞಾನ ವಿಸ್ಮಯ: 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣ ಬೆಳವಣಿಗೆ !!
ಪಾಕ್ ಗಡಿಯಲ್ಲಿ ಬಾಂಬ್, ಗ್ರೆನೇಡ್ಗಳಿದ್ದ ಡ್ರೋನ್ ಹೊಡೆದುರುಳಿಸಿದ ಸೇನೆ
ಮೋಜಿಗಾಗಿ ವಿದ್ವಂಸಕ ಕೃತ್ಯ: ಎಸಿ ಲೋಕಲ್ ರೈಲುಗಳಿಗೆ ಕಲ್ಲು ತೂರಾಟ!