Tragedy: ಮಹಾರಾಷ್ಟ್ರದ ನಾಗ್ಪುರದಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿ ದುರ್ಮರಣ, ಓರ್ವ ಗಂಭೀರ
Team Udayavani, Dec 16, 2023, 1:11 PM IST
ನಾಗ್ಪುರ: ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಟೋಲ್ ತಾಲೂಕಿನ ಸೋನ್ಖಾಂಬ್ನಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.
ಮೃತರನ್ನು ಅಜಯ್ ದಶರತ್ ಚಿಖಲೆ (45), ವಿಠ್ಠಲ್ ದಿಗಂಬರ ತೋಟೆ (45), ಸುಧಾಕರ ರಾಮಚಂದ್ರ ಮಾನಕರ್ (42), ರಮೇಶ್ ಓಂಕಾರ್ ಹೆಲೊಂಡೆ (48), ಮಯೂರ್ ಮೊರೇಶ್ವರ್ ಇಂಗಳೆ (26) ಮತ್ತು ವೈಭವ್ ಸಾಹೇಬರಾವ್ ಚಿಖಲೆ (32) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ ನಾಗ್ಪುರದಿಂದ ಕಟೋಲ್ ಕಡೆಗೆ ಕಾರಿನಲ್ಲಿ ಏಳು ಜನರು ಪ್ರಯಾಣಿಸುತ್ತಿದ್ದಾಗ ಟ್ರಕ್ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ನಾಗ್ಪುರದ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯ ಟ್ರಾಮಾ ಸೆಂಟರ್ಗೆ ದಾಖಲಿಸಲಾಗಿದೆ. ಘಟನೆಯಿಂದ ಕಾರು ಸಂಪೂರ್ಣ ಛಿದ್ರವಾಗಿದ್ದು ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Paragliding: ಎಲೆಕ್ಟ್ರಿಕ್ ಸ್ಕೂಟರ್ ಬಳಸಿ ಪ್ಯಾರಾಗ್ಲೈಡಿಂಗ್ ಮಾಡಿದ ಪಂಜಾಬ್ ವ್ಯಕ್ತಿ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ