ಪ್ರಧಾನಿ ಮೋದಿ ಮೆಟ್ರೋ ಪಯಣ
Team Udayavani, Sep 21, 2018, 6:00 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ 18 ನಿಮಿಷಗಳ ಕಾಲ ಮೆಟ್ರೋ ಸಂಚಾರ ನಡೆಸಿದ್ದಾರೆ. ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಶನ್ ಮತ್ತು ಎಕ್ಸ್ಪೋ ಸೆಂಟರ್ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲೆಂದು ತೆರಳುವಾಗ ಮೋದಿ ಅವರು ಧೌಲಾ ಕ್ವಾನ್ನಿಂದ ದ್ವಾರಕಾಗೆ ಏರ್ಪೋರ್ಟ್ ಎಕ್ಸ್ಪ್ರೆಸ್ ಮೆಟ್ರೋದಲ್ಲಿ ಸಂಚರಿಸಿದ್ದಾರೆ.
ವಿವಿಐಪಿಗಳ ಸಂಚಾರದ ವೇಳೆ ದಟ್ಟಣೆ ಉಂಟಾಗುವುದನ್ನು ತಪ್ಪಿಸಲು ಅವರು ಮೆಟ್ರೋ ಸೇವೆ ಆಯ್ಕೆ ಮಾಡಿಕೊಂಡರು ಎನ್ನಲಾಗಿದೆ. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, 2022ರೊಳಗೆ ಭಾರತದ ಆರ್ಥಿಕತೆ 5 ಲಕ್ಷಕೋಟಿ ಡಾಲರ್ ತಲುಪಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡಾ ವಿಲೀನ ಕುರಿತು ಪ್ರಸ್ತಾಪಿಸಿದ ಅವರು, ದೇಶದ ಹಿತಾಸಕ್ತಿಗಾಗಿ ಕಠಿಣ ನಿರ್ಧಾರ ಕೈಗೊಳ್ಳಲು ನಾವು ಹಿಂಜರಿಯುವುದಿಲ್ಲ ಎಂದಿದ್ದಾರೆ.
ಆಶಾ ಕಾರ್ಯಕರ್ತೆಯರ ಜತೆ ಸಂವಾದ: ಇದಕ್ಕೂ ಮುನ್ನ ಅವರು ದೇಶಾದ್ಯಂತದ ಸುಮಾರು 90 ಮಂದಿ ಆಶಾ ಕಾರ್ಯಕರ್ತೆಯರ ಜೊತೆ ಸಂವಾದ ನಡೆಸಿದರು. ಆಶಾ ಕಾರ್ಯಕರ್ತೆಯರ ಕೌಶಲ ಮತ್ತು ಬದ್ಧತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ