Bihar: ಶಾಲಾ ಮಕ್ಕಳಿಗೆ ಕೊಟ್ಟ ʼಖಿಚಡಿʼಯಲ್ಲಿ ಹಾವು ಪತ್ತೆ; ವಿದ್ಯಾರ್ಥಿಗಳು ಅಸ್ವಸ್ಥ
Team Udayavani, May 27, 2023, 5:03 PM IST

ಪಾಟ್ನಾ: ಮಧ್ಯಾಹ್ನದ ಬಿಸಿಯೂಟದಲ್ಲಿ ಹಾವು ಪತ್ತೆಯಾದ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯ ಫೋರ್ಬೆಸ್‌ಗಂಜ್‌ನಲ್ಲಿರುವ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿರುವುದು ವರದಿಯಾಗಿದೆ.
ಎನ್ ಜಿಒವೊಂದು ಫೋರ್ಬೆಸ್‌ಗಂಜ್‌ನಲ್ಲಿರುವ ಸರ್ಕಾರಿ ಶಾಲೆಯೊಂದಕ್ಕೆ ‘ಖಿಚಡಿ ʼಯನ್ನು ಬಡಿಸಿದೆ. ಒಂದು ಪ್ಲೇಟ್ ನಲ್ಲಿ ಹಾವು ಪತ್ತೆಯಾಗಿದ್ದು, ಕೂಡಲೇ ʼ ‘ಖಿಚಡಿʼಯನ್ನು ನೀಡುವುದನ್ನು ನಿಲ್ಲಿಸಿದ್ದಾರೆ. ಆದರೆ ಈ ವೇಳೆಗಾಗಲೇ ಹಲವು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ.
ವಿದ್ಯಾರ್ಥಿಗಳು ಅಸ್ವಸ್ಥಗೊಂಡು ವಾಂತಿ ಮಾಡಲು ಶುರು ಮಾಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಎಸ್‌ಡಿಎಂ, ಎಸ್‌ಡಿಒ ಮತ್ತು ಡಿಎಸ್‌ಪಿ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ.
100 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ʼಖಿಚಡಿʼ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಅಧಿಕಾರಿಗಳು ಕೇವಲ 25 ವಿದ್ಯಾರ್ಥಿಗಳು ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಿದಕ್ಕೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಗ್ರಾಮಸ್ಥರು ಶಾಲೆಯ ಬಳಿ ಹೋಗಿ, ಪ್ರತಿಭಟನೆ ನಡೆಸಿ, ಮುಖ್ಯ ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Congress ಛತ್ತೀಸ್‌ಗಢ, ಮಧ್ಯಪ್ರದೇಶದಲ್ಲಿ ಗೆಲ್ಲುವುದು ಖಚಿತ, ರಾಜಸ್ಥಾನದಲ್ಲಿ…: ರಾಹುಲ್

Vande Bharat; ಭಾರತೀಯ ರೈಲ್ವೆಯ ಪರಿವರ್ತನೆಗಾಗಿ ನಮ್ಮ ಸರ್ಕಾರದ ಕೆಲಸ: ಪ್ರಧಾನಿ ಮೋದಿ

WrestlersCase ಅವಕಾಶ ಸಿಕ್ಕಾಗೆಲ್ಲಾ ಬ್ರಿಜ್ ಭೂಷಣ್ ಕಿರುಕುಳ:ಕೋರ್ಟ್ ನಲ್ಲಿ ದೆಹಲಿಪೊಲೀಸರು