
ಮಧ್ಯಾಹ್ನದ ಊಟದಲ್ಲಿ ಹಾವು ಪತ್ತೆ: ವಿದ್ಯಾರ್ಥಿಗಳು ಅಸ್ವಸ್ಥ
Team Udayavani, Jan 10, 2023, 11:25 AM IST

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಆಹಾರವನ್ನು ಸೇವಿಸಿದ ಹಲವಾರು ಶಾಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಮಯೂರೇಶ್ವರ ಬ್ಲಾಕ್ ನ ಪ್ರಾಥಮಿಕ ಶಾಲೆಯ ಸುಮಾರು 30 ವಿದ್ಯಾರ್ಥಿಗಳು ಸೋಮವಾರ ಮಧ್ಯಾಹ್ನದ ಊಟದಲ್ಲಿ ಬಡಿಸಿದ ಆಹಾರವನ್ನು ಸೇವಿಸಿದ ನಂತರ ಅಸ್ವಸ್ಥರಾಗಿದ್ದಾರೆ ಎಂದು ಅವರು ಹೇಳಿದರು.
ಭೋಜನ ಸಿದ್ಧಪಡಿಸಿದ್ದ ಶಾಲೆಯ ಸಿಬ್ಬಂದಿಯೊಬ್ಬರು, ಬೇಳೆ ತುಂಬಿದ ಕಂಟೈನರ್ ಒಂದರಲ್ಲಿ ಹಾವು ಕಂಡುಬಂದಿದೆ ಎಂದು ಹೇಳಿಕೊಂಡಿದ್ದಾರೆ. ಮಕ್ಕಳು ಅಸ್ವಸ್ಥರಾಗಲು ಇದೇ ಕಾರಣ ಎನ್ನಲಾಗಿದೆ.
“ಮಕ್ಕಳು ವಾಂತಿ ಮಾಡಲು ಪ್ರಾರಂಭಿಸಿದ್ದರಿಂದ ನಾವು ಅವರನ್ನು ರಾಂಪುರಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಬೇಕಾಯಿತು” ಎಂದು ಅವರು ಹೇಳಿದರು.
ಇದನ್ನೂ ಓದಿ:ಭಾರತ-ಲಂಕಾ: ಸಚಿನ್ ತೆಂಡೂಲ್ಕರ್ ರ ಸಾರ್ವಕಾಲಿಕ ದಾಖಲೆ ಮುರಿಯುವತ್ತ ವಿರಾಟ್ ಕೊಹ್ಲಿ
ಮಧ್ಯಾಹ್ನದ ಊಟ ತಿಂದು ಮಕ್ಕಳು ಅಸ್ವಸ್ಥರಾಗುತ್ತಿರುವ ಬಗ್ಗೆ ಹಲವಾರು ಗ್ರಾಮಸ್ಥರಿಂದ ದೂರುಗಳು ಬಂದಿವೆ ಎಂದು ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೀಪಾಂಜನ್ ಜನಾ ಸುದ್ದಿಗಾರರಿಗೆ ತಿಳಿಸಿದರು.
ಓರ್ವ ವಿದ್ಯಾರ್ಥಿಯನ್ನು ಹೊರತು ಪಡಿಸಿ, ಅಸ್ವಸ್ಥರಾದ ಉಳಿದೆಲ್ಲಾ ವಿದ್ಯಾರ್ಥಿಗಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಆ ವಿದ್ಯಾರ್ಥಿಯೂ ಅಪಾಯದಿಂದ ಪಾರಾಗಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾನೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bihar ನಿರ್ಮಾಣ ಹಂತದ ಬೃಹತ್ ಸೇತುವೆ ಕುಸಿತ; ವಿಡಿಯೋ

Odisha train ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು:ಅಶ್ವಿನಿ ವೈಷ್ಣವ್

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

Manipur ಹೆದ್ದಾರಿಯಲ್ಲಿನ ದಿಗ್ಬಂಧನಗಳನ್ನು ತೆಗೆಯಿರಿ: ಅಮಿತ್ ಶಾ ವಿನಂತಿ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
