ಲಕ್ಷ ವಿದ್ಯಾರ್ಥಿಗಳಿಗೆ ಸೋಲಾರ್ ಕಿಟ್
Team Udayavani, Jul 28, 2018, 6:00 AM IST
ಮುಂಬಯಿ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 150ನೇ ಜನ್ಮದಿನ ಪ್ರಯುಕ್ತ, ಅ.2ರಂದು ದೇಶದ 1 ಲಕ್ಷ ವಿದ್ಯಾರ್ಥಿಗಳಿಗೆ ಸೋಲಾರ್ ಲ್ಯಾಂಪ್ ಕಿಟ್ ನೀಡಲಾಗುತ್ತದೆ. ಐಐಟಿ ಬಾಂಬೆಯ ವಜ್ರಮಹೋತ್ಸವ ಕಾರ್ಯಕ್ರಮ ಪ್ರಯುಕ್ತ ಸಂಸ್ಥೆಯ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸೌರ ಶಕ್ತಿ ರಾಯಭಾರಿಗಳಾಗಿರುವ 5 ಸಾವಿರ ವಿದ್ಯಾರ್ಥಿಗಳಿಗೆ ಕಿಟ್ ನೀಡಲಾಗುತ್ತದೆ. ಉಳಿದವರಿಗೆ ಆಯ್ಕೆ ಮಾಡಲಾಗಿರುವ ದೇಶದ 100 ಶಾಲೆಗಳಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಕಿಟ್ ನೀಡಲಾಗುತ್ತದೆ.
ಐಐಟಿ ಬಾಂಬೆಯ ಸೌರ ಶಕ್ತಿಯ ಮೂಲಕ ಸ್ಥಳೀಯ ಪ್ರದೇಶದ ಸಹ್ಯ ಅಭಿವೃದ್ಧಿ (ಎಸ್ಒಯುಐಎಸ್) ಈ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ. ಪ್ರತಿ ಕಿಟ್ಗೆ 500 ರೂ.ಇದೆ. ಇದರ ಜತೆಗೆ ಪ್ರತಿ ವಿದ್ಯಾರ್ಥಿಗೆ 100 ರೂ. ಕೂಡ ನೀಡಲಾಗುತ್ತದೆ. ಅದಕ್ಕೆ ಕೇಂದ್ರ ಹೊಸ ಮತ್ತು ಪುನರ್ಬಳಕೆ ಶಕ್ತಿ ಖಾತೆ ಸಚಿವಾಲಯ ನೆರವನ್ನೂ ನೀಡಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿ ಇರುವ ವಿದ್ಯಾರ್ಥಿಗಳು www.solarstudents.org ಕ್ಕೆ ಭೇಟಿ ನೀಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್