ಲೋಕಸಭಾ ಚುನಾವಣೆ 2019; ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ
Team Udayavani, Apr 11, 2019, 2:58 PM IST
ಉತ್ತರಪ್ರದೇಶ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರು. ಭರ್ಜರಿ ರೋಡ್ ಶೋ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಪುತ್ರ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ಹಾಗೂ ಕಾಂಗ್ರೆಸ್ ಮುಖಂಡರು ಜತೆಗಿದ್ದರು.
ಸೋನಿಯಾ ಗಾಂಧಿ 4 ಬಾರಿ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದು, ಇದೀಗ ಐದನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ರಾಯ್ ಬರೇಲಿ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ದಿನೇಶ್ ಪ್ರತಾಪ್ ಸಿಂಗ್ ಅಖಾಡಕ್ಕಿಳಿದಿದ್ದಾರೆ.
ಮಹಾಮೈತ್ರಿಕೂಟವಾದ ಬಹುಜನ್ ಸಮಾಜ್ ಪಕ್ಷ, ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕದಳ ರಾಯ್ ಬರೇಲಿ ಕ್ಷೇತ್ರದಲ್ಲಿ ತಮ್ಮ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಮೇ 6ರಂದು ರಾಯ್ ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಮೇ 23ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ