ಭ್ರಷ್ಟಾಚಾರ ಪ್ರಕರಣ; ಜಾಮೀನಿನ ಮೇಲೆ ಹೊರಗಿರುವ ಘಟಾನುಘಟಿ “ಕೈ” ನಾಯಕರು!

Team Udayavani, Aug 22, 2019, 3:01 PM IST

ನವದೆಹಲಿ:ಐಎನ್ ಎಕ್ಸ್ ಮೀಡಿಯಾ ಅವ್ಯವಹಾರದ ಪ್ರಕರಣದಲ್ಲಿ ಸಿಬಿಐ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರನ್ನು ಬಂಧಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಏತನ್ಮಧ್ಯೆ ಕಾಂಗ್ರೆಸ್ ನ ಹಲವಾರು ಪ್ರಭಾವಿ ಮುಖಂಡರು ಭ್ರಷ್ಟಾಚಾರ ಪ್ರಕರಣದಲ್ಲಿ ಶಾಮೀಲಾಗಿದ್ದು, ಕೋರ್ಟ್ ವಿಚಾರಣೆ ಎದುರಿಸುತ್ತಿದ್ದು ಅವರೆಲ್ಲ ಜಾಮೀನು ಪಡೆದುಕೊಂಡಿರುವುದಾಗಿ ವರದಿ ತಿಳಿಸಿದೆ.

ಜಾಮೀನು ಪಡೆದು ಹೊರಗಡೆ ಇರುವ ಕಾಂಗ್ರೆಸ್ ನಾಯಕರ ಪಟ್ಟಿ ದೊಡ್ಡದಿದೆ. ಅದರಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಾರ ಅಧ್ಯಕ್ಷೆ ಸೋನಿಯಾ ಗಾಂಧಿ, ಪುತ್ರ ರಾಹುಲ್ ಗಾಂಧಿ, ಸಂಸದ ಶಶಿ ತರೂರ್ ಸೇರಿದಂತೆ ಹಲವು ಮುಖಂಡರು ಸೇರಿದ್ದಾರೆ.

ಇನ್ನುಳಿದಂತೆ ಮಾಜಿ ಸಂಸದ ದಿಗ್ವಿಜಯ್ ಸಿಂಗ್, ಕಾಂಗ್ರೆಸ್ ಮುಖಂಡ, ನಟ ರಾಜ್ ಬಬ್ಬರ್, ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್, ಮೋತಿಲಾಲ್ ವೋರಾ, ನವಜ್ಯೋತ್ ಸಿಂಗ್ ಸಿಧು ಕೆಲವು ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿ ಸದ್ಯ ಜಾಮೀನು ಪಡೆದುಕೊಂಡಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ