ಇಡಿ ವಿಚಾರಣೆಗೆ ಕೆಲವೇ ದಿನ ಮೊದಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್ ಪಾಸಿಟಿವ್
Team Udayavani, Jun 2, 2022, 2:45 PM IST
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ. ರೋಗ ಲಕ್ಷಣಗಳು ಹೊಂದಿರುವ ಕಾರಣದಿಂದ ಸೋನಿಯಾ ಗಾಂಧಿ ಅವರು ಐಸೋಲೇಟ್ ಆಗಿದ್ದಾರೆ ಎಂದು ವರದಿ ತಿಳಿಸಿದೆ.
ಸೋನಿಯಾ ಗಾಂಧಿ ಅವರು ಕಳೆದೊಂದು ವಾರದಿಂದ ಪಕ್ಷದ ನಾಯಕರುಗಳ ಜೊತೆ ಸತತ ಸಭೆಯಲ್ಲಿ ತೊಡಗಿದ್ದಾರೆ. ಬುಧವಾರ ಸಂಜೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ ಸೋಂಕು ತಾಗಿರುವುದು ಪತ್ತೆಯಾಗಿದ್ದು, ಸದ್ಯ ಐಸೋಲೇಟ್ ಆಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
ಬುಧವಾರ ಸಂಜೆ ಅವರು ಜ್ವರದಿಂದ ಬಳಲುತ್ತಿದ್ದರು. ಪರೀಕ್ಷೆ ಮಾಡಿದಾಗ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸುರ್ಜೇವಾಲ ಹೇಳಿದರು.
ಸೋನಿಯಾ ಗಾಂಧಿ ಅವರು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆಗಾಗಿ ಇಡಿ ಮುಂದೆ ಹಾಜರಾಗುವ ಕೆಲವೇ ದಿನಗಳ ಮೊದಲು ಕೋವಿಡ್ ಪಾಸಿಟಿವ್ ವರದಿಯಾಗಿದೆ.ಜೂನ್ 8 ರಂದು ಆಕೆ ತನಿಖಾ ಸಂಸ್ಥೆಯ ಮುಂದೆ ಹಾಜರಾಗಬೇಕಿದೆ.
ಇದನ್ನೂ ಓದಿ:ಕೊಲೆಗಳ ಕಥೆ ಹೇಳುತ್ತಿದೆ ಕಾಗಿಣಾ ತೀರ:ಕತ್ತಿ ಗುರಾಣಿಗಳಿಗೆ ಬೀದಿ ಹೆಣವಾಗುತ್ತಿರುವ ಅಮಾಯಕರು
ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ (ಜಾರಿ ನಿರ್ದೇಶನಾಲಯ) ಸಮನ್ಸ್ ನೀಡಿದೆ. ರಾಹುಲ್ ಗಾಂಧಿಯವರಿಗೆ ಜೂ. 2ರಂದು ಹೊಸದಿಲ್ಲಿಯ ಇ.ಡಿ. ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಸೋನಿಯಾ ಗಾಂಧಿ ಜೂ. 8ರಂದು ವಿಚಾರಣೆ ಎದುರಿಸಲಿದ್ದಾರೆ.
ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದಾರೆ. ಹೀಗಾಗಿ ಜೂ. 5ರ ಬಳಿಕ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಬೇಕು ಎಂದು ಇ.ಡಿ.ಗೆ ಮನವಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ಅಭಿಷೇಕ್ ಮನುಸಿಂಘ್ವಿ ಮತ್ತು ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ