ಅಂದು ಕೆಲವು ಸಂಘಟನೆ ಕ್ವಿಟ್ ಇಂಡಿಯಾ ಚಳವಳಿಯನ್ನು ವಿರೋಧಿಸಿದ್ದವು!
Team Udayavani, Aug 9, 2017, 12:45 PM IST
ನವದೆಹಲಿ:ಕೆಲವು ಸಂಘಟನೆಗಳು ಕ್ವಿಟ್ ಇಂಡಿಯಾ ಚಳವಳಿಯನ್ನು ವಿರೋಧಿಸಿದ್ದವು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಲೋಕಸಭೆಯ ಕಲಾಪದಲ್ಲಿ ಸಂಘಟನೆಯ ಹೆಸರು ಹೇಳದೆ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಕ್ವಿಟ್ ಇಂಡಿಯಾ ಚಳವಳಿಗೆ 75 ವರ್ಷ ಪೂರೈಸಿದ ಹಿನ್ನೆಲೆ ಲೋಕಸಭೆ ಕಲಾಪದಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಕ್ವಿಟ್ ಇಂಡಿಯಾ ಚಳವಳಿಯನ್ನು ಕೆಲವು(ಆರ್ ಎಸ್ ಎಸ್) ಸಂಘಟನೆಗಳು ವಿರೋಧಿಸಿದ್ದನ್ನು ನಾವು ಮರೆಯಲು ಸಾಧ್ಯವಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಅಂತಹ ಸಂಘಟನೆಗಳು ಯಾವುದೇ ಪಾತ್ರ ವಹಿಸಿಲ್ಲ ಎಂದು ಹೇಳಿದರು.
ಸೋನಿಯಾ ಅವರು ಈ ಸಂದರ್ಭದಲ್ಲಿ ವಿಡಿ(ವಿನಾಯಕ ದಾಮೋದರ್) ಸಾವರ್ಕರ್ ಅವರನ್ನು ಗುರಿಯಾಗಿರಿಸಿಕೊಂಡು ಕೂಡಾ ಈ ಮಾತನ್ನು ಹೇಳಿದ್ದರು. 1942ರಲ್ಲಿ ಗಾಂಧಿ ಚಾಲನೆ ನೀಡಿದ್ದ ಕ್ವಿಟ್ ಇಂಡಿಯಾ ಚಳವಳಿಯನ್ನು ಸಾರ್ವಕರ್ ವಿರೋಧಿಸಿದ್ದರು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರು ಪ್ರಾಣ ತ್ಯಾಗ ಮಾಡಿದ್ದಾರೆ ಎಂಬುದನ್ನು ಸ್ಮರಿಸಿಕೊಂಡರು. ಹಾಗಾಗಿ ಕ್ವಿಟ್ ಇಂಡಿಯಾ ಚಳವಳಿಗೆ 75 ವರ್ಷ ಪೂರೈಸಿದ ನಿಟ್ಟಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ, ಗೌರವಿಸಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು