ಸೋಪುರ್ನಲ್ಲಿ ಗುಂಡಿನ ಕಾಳಗ:ಇಬ್ಬರು ಉಗ್ರರನ್ನು ಹತ್ಯೆಗೈದ ಸೇನೆ
Team Udayavani, Jun 21, 2017, 9:58 AM IST
ಶ್ರೀನಗರ : ಬಾರಾಮುಲ್ಲಾ ಜಿಲ್ಲೆಯ ಪಝಲ್ಪೋರಾ ಪ್ರದೇಶದಲ್ಲಿ ಮನೆಯೊಂದರಲ್ಲಿ ಅಡಗಿದ್ದ ಉಗ್ರರ ವಿರುದ್ಧ ಬುಧವಾರ ಕಾರ್ಯಾಚರಣೆಗಿಳಿದ ಸೇನಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿವೆ.
ಸ್ಥಳದಲ್ಲಿ ಉಗ್ರರ ಬಳಿಯಿಂದ 2 ಎಕೆ 47 ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರು ಅಡಗಿದ್ದ ಕುರಿತಾಗಿ ಮಾಹಿತಿ ಬಂದ ಹಿನ್ನಲೆಯಲ್ಲಿ ಮಂಗಳವಾರ ರಾತ್ರಿಯೇ ಸೇನಾ ಪಡೆಗಳು ಕಾರ್ಯಾಚರಣೆಗಿಳಿದಿದ್ದವು. ಸ್ಥಳದಲ್ಲಿ ಇನ್ನೂ ಕೆಲ ಉಗ್ರರು ಅಡಗಿರುವ ಶಂಕೆ ಹಿನ್ನಲೆಯಲ್ಲಿ ಶೋಧ ಕಾರ್ಯ ಮುಂದುವರಿದಿದೆ.
ಹತ ಉಗ್ರರು ಹಿಜ್ಬುಲ್ ಮುಜಾಯಿದ್ದೀನ್ ಉಗ್ರ ಸಂಘಟನೆಗೆ ಸೇರಿದವರು ಎಂದು ತಿಳಿದು ಬಂದಿದೆ.