ಪ್ರಧಾನಿ ಎಸ್‌ಪಿ-ಬಿಎಸ್‌ಪಿ ಮೈತ್ರಿ ಕೂಟದಿಂದ ಹೆದರಿ ಹೋಗಿದ್ದಾರೆ: ಮಾಯಾವತಿ

ನಮ್ಮ ಮೈತ್ರಿ ಕೂಟ ಮುರಿಯುವುದು ಅಸಾಧ್ಯ

Team Udayavani, May 5, 2019, 1:16 PM IST

ಲಕ್ನೋ : ಉತ್ತರಪ್ರದೇಶದಲ್ಲಿ ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಹೆದರಿ ಹೋಗಿದ್ದಾರೆ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಭಾನುವಾರ ಹೇಳಿಕೆ ನೀಡಿದ್ದಾರೆ.

ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟವನ್ನು ಮುರಿಯುವುದು ಅಸಾಧ್ಯವಾದ ಮಾತು ಎಂದು ಪ್ರಧಾನಿ ಅರ್ಥ ಮಾಡಿಕೊಳ್ಳಲಿ ಎಂದು ಮಾಯಾವತಿ ಹೇಳಿದರು.

ಹೆದರಿರುವ ಬಿಜೆಪಿ ಅಧಿಕಾರಯಂತ್ರವನ್ನು ದುರಪಯೋಗ ಪಡಿಸಿಕೊಂಡು ಮೈತ್ರಿಕೂಟವನ್ನು ಮುರಿಯಲು ಮುಂದಾಗಿದೆ ಎಂದು ಮಾಯಾವತಿ ಆರೋಪಿಸಿದರು.

ಇಲ್ಲಿವರೆಗೆ ಉತ್ತರಪ್ರದೇಶದಲ್ಲಿ ನಡೆದಿರುವ ನಾಲ್ಕು ಹಂತಗಳ ಮತದಾನದಲ್ಲಿ ನಮ್ಮ ಮೈತ್ರಿಕೂಟಕ್ಕೆ ಮತದಾರರು ಅಭೂತಪೂರ್ವ ಬೆಂಬಲ ನೀಡಿದ್ದಾರೆ ಎಂದು ಮಾಯಾವತಿ ಹೇಳಿದ್ದಾರೆ.

ನಿರಂಕುಶಾಧಿಕಾರಿಯ ಸರ್ಕಾರ ಮೇ 23 ರಂದು ಪತನವಾಗುವುದು ಖಚಿತ ಎಂದು ಮಾಯಾವತಿ ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ