ಮುಲಾಯಂ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
Team Udayavani, Oct 2, 2022, 5:38 PM IST
ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ, ಹಿರಿಯ ರಾಜಕಾರಣಿ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಯ ಐಸಿಯು ವಾರ್ಡ್ ಗೆ ದಾಖಲಿಸಲಾಗಿದೆ.
82 ವರ್ಷದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರು ಹಲವು ದಿನಗಳಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಆರೋಗ್ಯ ಸ್ಥಿತಿ ಗಂಭೀರವಾದ ನಂತರ ಅವರನ್ನು ಐಸಿಯು ಗೆ ಸ್ಥಳಾಂತರಿಸಲಾಗಿದೆ.
ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ. ಅವರು ಪ್ರಸ್ತುತ ಇಂಟರ್ನಲ್ ಮೆಡಿಸಿನ್ ತಜ್ಞ ಡಾ ಸುಶೀಲಾ ಕಟಾರಿಯಾ ಅವರ ಮೇಲ್ವಿಚಾರಣೆಯಲ್ಲಿದ್ದಾರೆ.
ಇದನ್ನೂ ಓದಿ:ಮಂಡ್ಯ; ಆಡುವಾಗ ಬಿದ್ದು ಮೃತಪಟ್ಟ ಎಂಟು ವರ್ಷದ ಬಾಲಕ
ಪುತ್ರ ಅಖಿಲೇಶ್ ಯಾದವ್ ಅವರು ಮತ್ತು ಶಿವಪಾಲ್ ಯಾದವ್ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ ಎಂದು ವರದಿಯಾಗಿದೆ.