ಕೋವಿಡ್ 19 ವಿರುದ್ಧ ಹೋರಾಟಕ್ಕೆ ಪ್ಯಾಕೇಜ್‌

Team Udayavani, Mar 19, 2020, 7:25 AM IST

ಕೋವಿಡ್ 19 ವಿರುದ್ಧ ಹೋರಾಟಕ್ಕೆ ಪ್ಯಾಕೇಜ್‌

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್ 19 ಸೋಂಕಿನ ವಿರುದ್ಧ ಹೋರಾಟ ನಡೆಸಲು ವಿಶ್ವದ ರಾಷ್ಟ್ರಗಳು ಸಜ್ಜಾಗಿವೆ. ವಿಶೇಷವಾಗಿ ಅಮೆರಿಕ, ಬ್ರಿಟನ್‌ ಬಹುಕೋಟಿ ಮೊತ್ತ ಬಿಡುಗಡೆ ಮಾಡಿವೆ.ಅಮೆರಿಕ ಸರಕಾರ ಬಹು ಕೋಟಿ ಡಾಲರ್‌ ಮೊತ್ತವನ್ನು ವೈರಸ್‌ ವಿರುದ್ಧ ಹೋರಾಟಕ್ಕೆ ಬಳಕೆ ಮಾಡಲಿದೆ. ಆದರೆ ಅವರು ಖಚಿತ ಮೊತ್ತದ ವಿವರ ನೀಡಿಲ್ಲ. ಆದರೆ “ದ ವಾಷಿಂಗ್ಟನ್‌ ಪೋಸ್ಟ್‌’ ವರದಿ ಮಾಡಿರುವ ಪ್ರಕಾರ 850 ಬಿಲಿಯ ಅಮೆರಿಕನ್‌ ಡಾಲರ್‌ ಮೊತ್ತದ ನೆರವು ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಿಕೊಂಡಿದೆ. ಇದರ ಜತೆಗೆ ಐರೋಪ್ಯ ಒಕ್ಕೂಟದ ರಾಷ್ಟ್ರಗಳು ತಮ್ಮ ತಮ್ಮ ಗಡಿ ಮುಚ್ಚಿವೆ.

330 ಬಿಲಿಯನ್‌ ಪೌಂಡ್‌
ಸೋಂಕಿನ ವಿರುದ್ಧ ಹೋರಾಟ ನಡೆಸಲು ಬ್ರಿಟನ್‌ ಸರಕಾರ 330 ಬಿಲಿಯನ್‌ ಪೌಂಡ್‌ ಮೊತ್ತವನ್ನು ಘೋಷಿಸಿದೆ. ಹಣಕಾಸು ಸಚಿವ ರಿಷಿ ಸುನಕ್‌ ಈ ಅಂಶ ಪ್ರಕಟಿಸಿದ್ದಾರೆ. ಫ್ರಾನ್ಸ್‌ ಕೂಡ 45 ಬಿಲಿಯನ್‌ ಯೂರೋಗಳನ್ನು ಪ್ರಕಟಿಸಿದೆ.

ಎಡಿಬಿ ನೆರವು: ಕೊರೊನಾ ವೈರಸ್‌ ಸೋಂಕಿನ ವಿರುದ್ಧ ಹೋರಾಡುತ್ತಿರುವ ತನ್ನ ಅಭಿವೃದ್ಧಿಶೀಲ ಸದಸ್ಯ ರಾಷ್ಟ್ರಗಳಿಗೆ ನೆರವಾಗಲು ಏಷ್ಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ (ಎಡಿಬಿ), 6.5 ಬಿಲಿಯನ್‌ ಡಾಲರ್‌ ಪ್ಯಾಕೇಜ್‌ ಘೋಷಿಸಿದೆ. ಕೊರೊನಾ ಸಾಂಕ್ರಾಮಿಕ ಸೋಂಕು ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ.

ಹೀಗಾಗಿ ನಮ್ಮ ಅಭಿವೃದ್ಧಿಶೀಲ ಸದಸ್ಯ ರಾಷ್ಟ್ರಗಳು ಸೋಂಕು ತಡೆಗೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಅನುಕೂಲ ವಾಗುವಂತೆ ಹಣಕಾಸು ನೆರವಿನ ಆರಂಭಿಕ ಪ್ಯಾಕೇಜ್‌ ನ್ನು ಘೋಷಿಸಿರುವುದಾಗಿ ಎಡಿಬಿ ಅಧ್ಯಕ್ಷ ಮಸಾತ್ಸುಂಗು ಆಸಕವಾ ತಿಳಿಸಿದ್ದಾರೆ.

ಗೆಲ್ಲಲಿದ್ದೇವೆ
ಕೊರೊನಾ ವಿರುದ್ಧ ವಿಶ್ವವೇ ಯುದ್ಧ ಸಾರಿದೆ. ಅದರ ವಿರುದ್ಧ ಗೆಲ್ಲಲಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ. ವಾಷಿಂಗ್ಟನ್‌ನಲ್ಲಿ ಮಾತನಾಡಿದ ಅವರು ಇದರಿಂದ ಹೇಗಾದರೂ ಮಾಡಿ ಹೊರಬರಬೇಕಾಗಿದೆ ಎಂದಿದ್ದಾರೆ. ಸಂಕಷ್ಟದಲ್ಲಿರುವ ವೈಮಾನಿಕ ಸಂಸ್ಥೆಗಳಿಗೆ ನೆರವು ನೀಡಬೇಕಾದದ್ದು ಸರಕಾರದ ಕರ್ತವ್ಯ. ಏಕೆಂದರೆ ಸದ್ಯದ ಬಿಕ್ಕಟ್ಟು ಅವರು ಸೃಷ್ಟಿಸಿಕೊಂಡದ್ದಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.