
ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 18 ಮಂದಿ ಸಾವು, ಹಲವರಿಗೆ ಗಂಭೀರ ಗಾಯ
Team Udayavani, Jul 28, 2021, 8:30 AM IST

ಉತ್ತರಪ್ರದೇಶ: ಟ್ರಕ್ ಒಂದು ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಸುಮಾರು 18 ಜನರು ಮೃತಪಟ್ಟು ಹಲವರು ಗಂಭೀರ ಗಾಯಗೊಂಡ ದಾರುಣ ಘಟನೆ ಉತ್ತರಪ್ರದೇಶದ ಬಾರಬಾಂಕಿಯಲ್ಲಿ ನಡೆದಿದೆ.
ಅಯೋಧ್ಯ- ಲಕ್ನೋ ಹೆದ್ದಾರಿಯಲ್ಲಿ ರಾಮ್ ಸನೇಹಿ ಪೊಲೀಸ್ ಠಾಣೆಯ ಬಳಿಯಲ್ಲೆ ಈ ಅಪಘಾತ ನಡೆದಿದೆ ಎಂದು ವರದಿಯಾಗಿದೆ. ಬಸ್ ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು. ಎಲ್ಲರೂ ಕಾರ್ಮಿಕರಾಗಿದ್ದು ಹರ್ಯಾಣದ ಪಲ್ವಾಲದಿಂದ ಬಿಹಾರದ ಕಡೆ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆ್ಯಕ್ಸಲ್ ಮುರಿದಿದ್ದರಿಂದ ರಾಮ್ ಸನೇಹಿ ಘಾಟ್ ಪೊಲೀಸ್ ಸ್ಟೇಷನ್ ಬಳಿಯಿರುವ ಢಾಬ ಬಳಿ ಬಸ್ ಅನ್ನು ನಿಲ್ಲಿಸಲಾಗಿತ್ತು. ಈ ವೇಳೆ ವೇಗವಾಗಿ ಬಂದ ಟ್ರಕ್ ಒಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ 18 ಮಂದಿ ಸಾವನ್ನಪ್ಪಿದ್ದಾರೆ.
ಮಂಗಳವಾರ ( ಜುಲೈ 27) ರಾತ್ರಿ ಈ ದುರ್ಘಟನೆ ನಡೆದಿದ್ದು ಬಿಹಾರದ 18 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 19 ಕ್ಕಿಂತ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಲಕ್ನೋದ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಲಕ್ನೋ ಎಡಿಜಿ ಎಸ್ ಎನ್ ಸಾಬತ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್ʼ ಹೊಸ ಪೋಸ್ಟರ್ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ