ಮಹಾಮೈತ್ರಿ ಕೂಟದಲ್ಲಿ ಒಡಕು?


Team Udayavani, Jan 11, 2019, 12:30 AM IST

q-35.jpg

ಹೈದರಾಬಾದ್‌: ಲೋಕಸಭೆ ಚುನಾವಣೆಗಾಗಿ ಬಿಜೆಪಿ ವಿರುದ್ಧ ರೂಪುಗೊಳ್ಳಲಿರುವ ಮಹಾಮೈತ್ರಿಯ ಶಕ್ತಿ ಪ್ರದರ್ಶನ ಕ್ಕಾಗಿ ಜ. 19ರಂದು ಕೋಲ್ಕತಾದಲ್ಲಿ ನಡೆಯಲಿರುವ ಮಹಾ ರ್ಯಾಲಿಯೊಂದು ಆಯೋಜನೆಗೊಳ್ಳುವ ಮೊದಲೇ ಈ ಘಟಬಂಧನದಲ್ಲಿ ಬಿರುಕು ಕಾಣಿಸಿಕೊಳ್ಳತೊಡಗಿದೆ. ಈ ರ್ಯಾಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಪಾಲ್ಗೊಂಡರೆ ತಾವು ರ್ಯಾಲಿಯಿಂದ ಹಿಂದೆ ಸರಿಯಲು ತೆಲಂಗಾಣ ಸಿಎಂ ಹಾಗೂ ಟಿಆರ್‌ಎಸ್‌ ಮುಖ್ಯಸ್ಥ ಕೆ. ಚಂದ್ರಶೇಖರ್‌ ರಾವ್‌ (ಕೆಸಿಆರ್‌) ನಿರ್ಧರಿಸಿದ್ದಾರೆನ್ನಲಾಗಿದೆ. 

ಅಸಲಿಗೆ, ಕೆಸಿಆರ್‌ ಅವರಿಗೆ ಬಿಜೆಪಿ, ಕಾಂಗ್ರೆಸ್‌ ಹೊರತಾದ ಸ್ಥಳೀಯ ಪಕ್ಷಗಳ ಮೈತ್ರಿಕೂಟ ರಚಿಸುವ ಮಹತ್ವಾಕಾಂಕ್ಷೆಯಿದೆ. ಇದೇ ಆಶಯದೊಂದಿಗೆ ಅವರು ಕಳೆದ ವರ್ಷ ಡಿ. 24ರಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಮಾತುಕಡೆ ನಡೆಸಿದ್ದರು. ಈ ಮಾತು ಕತೆಯ ವೇಳೆ ಕಾಂಗ್ರೆಸ್ಸನ್ನು ಬದಿಗಿಟ್ಟು ಮೈತ್ರಿಕೂಟ ರಚಿಸುವ ಬಗ್ಗೆ ಮಮತಾ ಒಲವು ತೋರಲಿಲ್ಲವಾದ್ದರಿಂದ ರ್ಯಾಲಿಯಿಂದ ದೂರ ಉಳಿಯಲು ಕೆಸಿಆರ್‌ ನಿರ್ಧರಿಸಿದ್ದಾರೆನ್ನಲಾಗಿದೆ.

ಸ್ಥಾನ ಹೊಂದಾಣಿಕೆ ನನೆಗುದಿಗೆ 
ಲೋಕಸಭೆ ಚುನಾವಣೆಗಾಗಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಮತ್ತು ಎನ್‌ಸಿಪಿ ನಡುವಿನ ಸ್ಥಾನ ಹೊಂದಾಣಿಕೆ ಮಾತುಕತೆ ಯಶಸ್ವಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಬುಧವಾರ,  ಹೊಸದಿಲ್ಲಿಯ ಜನಪಥ್‌ನಲ್ಲಿರುವ ಶರದ್‌ ಪವಾರ್‌ ನಿವಾಸದಲ್ಲಿ ರಾಹುಲ್‌-ಪವಾರ್‌ ಮಾತುಕತೆ ನಡೆಸಿದ್ದು, ಈ ವೇಳೆ, ಯವತ್ಮಾಲ್‌, ವಾಶಿಂ, ಬುಲಾœನಾ, ನಂದೂರ್ಬರ್‌, ರಾವೇರ್‌, ಅಹ್ಮದಾನಗರ್‌, ರತ್ನಗಿರಿ, ಸಿಂಧುಗಢ್‌ ಹಾಗೂ ಪುಣೆ ಕ್ಷೇತ್ರಗಳ ಹಂಚಿಕೆ ಕಗ್ಗಂಟಾಗಿಯೇ ಉಳಿಯಿತು ಎನ್ನಲಾಗಿದೆ. ಸದ್ಯದಲ್ಲೇ ಕಾಂಗ್ರೆಸ್‌ ಮಹಾ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ಮಹಾ ಕಾರ್ಯದರ್ಶಿ ಪ್ರಫ‌ುಲ್‌ ಪಟೇಲ್‌ ನಡುವೆ ಮತ್ತೂಂದು ಸುತ್ತಿನ ಮಾತುಕತೆ ನಡೆಯಲಿದೆ. 

ಶೀಲಾ ದೀಕ್ಷಿತ್‌ಗೆ ಹೊಣೆ
ಹೊಸದಿಲ್ಲಿ: ದಿಲ್ಲಿ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ (80)ರನ್ನು ಗುರುವಾರ ನೇಮಿಸಲಾಗಿದೆ. ಜತೆಗೆ ಮೂವರು ನಾಯಕರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದೀಕ್ಷಿತ್‌ ಪಕ್ಷದ ನಿರ್ಧಾರವನ್ನು ಗೌರವದಿಂದ ಸ್ವೀಕರಿಸುವುದಾಗಿ ತಿಳಿಸಿದ್ದಾರೆ. ಮಾಜಿ ಅಧ್ಯಕ್ಷ ಅಜಯ್‌ ಮಕಾನ್‌ ಹಿರಿಯ ನಾಯಕಿಯನ್ನು ಅಭಿನಂದಿಸಿದ್ದಾರೆ.

ಮೈತ್ರಿಕೂಟದ ಮಹಾರ್ಯಾಲಿಯಿಂದ ದೂರ ವಿರಲು ನಿರ್ಧರಿಸಿದ ತೆಲಂಗಾಣ ಸಿಎಂ
ರಾಹುಲ್‌ ಜತೆಗೆ ವೇದಿಗೆ ಹಂಚಿಕೊಳ್ಳಲು ಕೆ. ಚಂದ್ರಶೇಖರ್‌ ರಾವ್‌ ನಿರಾಕರಣೆ 
ಕಾಂಗ್ರೆಸ್‌, ಬಿಜೆಪಿ ಹೊರತಾದ ಮೈತ್ರಿಕೂಟ ರಚನೆ ಬಗ್ಗೆ ರಾವ್‌ ಒಲವು
ಸದ್ಯದ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ಇರುವ ಕಾರಣ ರ್ಯಾಲಿಯಲ್ಲಿ ಭಾಗವಹಿಸಲು ನಕಾರ

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.